ಲೈಂಗಿಕ ದೌರ್ಜನ್ಯ ಪ್ರಕರಣ: ಮಾಜಿ ಸಚಿವ ರೇವಣ್ಣಗೆ ಜಾಮೀನು ಮಂಜೂರು

Prasthutha|

ಬೆಂಗಳೂರು: ಲೈಂಗಿಕ ದೌರ್ಜನ್ಯ ನೀಡಿದ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರಿಗೆ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮೆಜಿಸ್ಟ್ರೇಟ್ ಕೋರ್ಟ್ (ಎಸಿಎಂಎಂ) ಜಾಮೀನು ಮಂಜೂರು ಮಾಡಿದೆ.

- Advertisement -


ಐದು ಲಕ್ಷ ಬಾಂಡ್, ಒಬ್ಬ ಶ್ಯೂರಿಟಿ ಒದಗಿಸುವಂತೆ ಹೇಳಿ ನ್ಯಾ. ಜೆ ಪ್ರೀತ್ ಅವರಿದ್ದ ಪೀಠ ಷರತ್ತುಬದ್ಧ ಜಾಮೀನು ನೀಡಿದೆ.


ಈ ಹಿಂದೆ ಶಿವರಾಜ್ ಎಂಬುವರ ಶ್ಯೂರಿಟಿ ಸಲ್ಲಿಸಲಾಗಿತ್ತು. ಇದನ್ನು ಪರಿಗಣಿಸಿದ ನ್ಯಾಯಪೀಠ ಸೆಕ್ಷನ್ 354ಎ, 354ಡಿ, 506, 509 ಅಡಿಯಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. ಹಾಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಸಬಹುದು ಎಂದು 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶೆ ಜೆ.ಪ್ರೀತ್ ಹೇಳಿದ್ದಾರೆ



Join Whatsapp