ಲೈಂಗಿಕ ದೌರ್ಜನ್ಯ: ಬಾಲಕಿಯರ ಹೇಳಿಕೆ ಮುಂದಿಟ್ಟು ಮುರುಘಾ ಶ್ರೀ ವಿಚಾರಣೆ ನಡೆಸಿದ ಪೊಲೀಸರು

Prasthutha|

ಚಿತ್ರದುರ್ಗ: ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯದ ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಪೊಲೀಸರು ರಹಸ್ಯ ಸ್ಥಳದಲ್ಲಿ ತೀವ್ರ ವಿಚಾರಣೆ ನಡೆಸಿದ್ದಾರೆ.

- Advertisement -

ವಿಚಾರಣೆ ನಡೆಸುವ ಸ್ಥಳ ಗೊತ್ತಾದರೆ ಭಕ್ತರು  ಅಭಿಮಾನಿಗಳು ಧಾವಿಸಿ ಗೊಂದಲ ಉಂಟಾಗುವ ಹಿನ್ನೆಲೆಯಲ್ಲಿ ರಹಸ್ಯ ಸ್ಥಳದಲ್ಲಿ ಶ್ರೀಗಳನ್ನು ವಿಚಾರಣೆ ನಡೆಸಿ ಪೊಲೀಸರು ಪ್ರಕರಣದ ಮಾಹಿತಿಯನ್ನು ಸಂಗ್ರಹಿಸತೊಡಗಿದ್ದಾರೆ.

ನಗರದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಖುದ್ದಾಗಿ ನಿನ್ನೆ ಸಂಜೆ ಹಾಜರಾದ ನ್ಯಾಯಾಂಗ ಬಂಧನದಲ್ಲಿದ್ದ ಶರಣರನ್ನು ತಮ್ಮ ವಶಕ್ಕೆ ಒಪ್ಪಿಸುವಂತೆ ಪೊಲೀಸರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶೆ ಬಿ.ಕೆ. ಕೋಮಲಾ ಅವರು  ಸೆ.5 ರವರೆಗೆ ಪೊಲೀಸ್ ವಶಕ್ಕೆ ನೀಡಿದ್ದರು.

- Advertisement -

ಇದೇ ವೇಳೆ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದೊಯ್ಯಲು ಕಾರಾಗೃಹದ ಅಧೀಕ್ಷಕರು ಸಿದ್ಧತೆ ನಡೆಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಶ್ರೀಗಳನ್ನು ವಶಕ್ಕೆ ತೆಗೆದುಕೊಂಡು ಡಿವೈಎಸ್ ಪಿ ಕಚೇರಿಗೆ ಕರೆದೊಯ್ದು ಅಲ್ಲಿಂದ ರಹಸ್ಯ ಸ್ಥಳಕ್ಕೆ ಕರೆದುಕೊಂಡು ಹೋಗಿ ವಿಚಾರಣೆ  ಮುಂದುವರೆಸಲಾಗಿದೆ.

ಶ್ರೀಗಳು ಅನಾರೋಗ್ಯ ಸಮಸ್ಯೆ ಎದುರಿಸುತ್ತಿರುವುದರಿಂದ ತಜ್ಞ ವೈದ್ಯರನ್ನು ವಿಚಾರಣಾ ಕೊಠಡಿಯ ಬಳಿಯೇ ಇರಿಸಿಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪ್ರತಿ ವಾರ ಒಂದು ಹೆಣ್ಣು ಮಗು ಹಣ್ಣು ಹಂಪಲನ್ನು ನೀಡಲು ಅವರ ಕೋಣೆಗೆ ಕಳಿಸಲಾಗುತ್ತಿತ್ತು. ಅಲ್ಲಿ ಶರಣರು ಇಷ್ಟವಿಲ್ಲ ಎಂದು ಹೇಳಿದರೂ ಹುಡುಗಿಯರ ಖಾಸಗಿ ಭಾಗಗಳನ್ನು ಮುಟ್ಟುತ್ತಿದ್ದ ಆರೋಪದ ಬಗ್ಗೆ ತನಿಖಾಧಿಕಾರಿಗಳು ಪ್ರಶ್ನಿಸಿ ಹೇಳಿಕೆ ದಾಖಲಿಸಿದ್ದಾರೆ.

ಹಣ್ಣು ಕೊಡಲು ಬಂದ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಮಾಡುತ್ತಿದ್ದು ನಂತರ ಸ್ವಚ್ಛಗೊಳಿಸಲು ಟಿಶ್ಯೂ ಬಳಸಿ ವಿದ್ಯಾರ್ಥಿನಿಯರಿಗೆ ಸ್ನಾನದ ಕೋಣೆಗೆ ಹೋಗಿ ಸ್ನಾನ ಮಾಡಿ ಹೋಗುವಂತೆ ಹೇಳುತ್ತಿದ್ದರು ಎಂದು ಮಾಡಿರುವ ಆರೋಪದ ಬಗ್ಗೆಯೂ ಪ್ರಶ್ನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರತಿನಿತ್ಯ ಒಂದು ಹುಡುಗಿಯನ್ನು ಆಪ್ತ ಸಹಾಯಕರು ಕರೆದುಕೊಂಡು ಹೋಗಿ ಶರಣರ ಕೋಣೆಯಲ್ಲಿ ಕೂಡಿಹಾಕುತ್ತಿದ್ದರು. ಹಲವಾರು ಬಾರಿ ಈ ರೀತಿ ನಡೆದ ನಂತರ ಅದರ ವಿಡಿಯೋಗಳನ್ನು ಕೂಡ ಮಾಡಲಾಗಿದೆ ಎಂದು ಹೇಳಲಾಗಿದೆ. ಆದರೆ ಶರಣರು ಅವರ ವಿರುದ್ಧದ ಯಾವುದೇ ವರದಿಯನ್ನು ಬಿತ್ತರಿಸದಂತೆ ಕೋರ್ಟ್‌ನಿಂದ ಆದೇಶ ಪಡೆದ ಬಗ್ಗೆ ಕೂಡ ಪ್ರಶ್ನಿಸಿ ಹೇಳಿಕೆ ಪಡೆಯಲಾಗಿದೆ.

ಈ ನಡುವೆ ಕಳೆದ ಜುಲೈ 24ರಂದು ಬಾಲಕಿಯರು ದೌರ್ಜನ್ಯದಿಂದ ಬೇಸತ್ತು ಬೆಂಗಳೂರಿಗೆ ಬಂದಿದ್ದು ಅವರನ್ನು ಹಾಸ್ಟೆಲ್ ನಿಂದ ಅವರನ್ನು ಹೊರ ಹಾಕಲಾಗಿರುವುದು

ಅಲ್ಲಿಂದ ಬೆಂಗಳೂರಿಗೆ ಕಾಟನ್ ಪೇಟೆ ಪೊಲೀಸ್ ಠಾಣೆಗೆ ಹೋಗಿ  ಸ್ವಾಮೀಜಿಯವರು ತಮ್ಮ ಮೇಲೆ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ಹೇಳಿರುವುದು ನ್ಯಾಯಾಧೀಶರ ಮುಂದೆ 164ಅನ್ವಯ ದಾಖಲಿಸಿದ ಹೇಳಿಕೆ ಹಾಗೂ ವೈದ್ಯಕೀಯ ಪರೀಕ್ಷೆಯ ವರದಿಯನ್ನು ಇಟ್ಟುಕೊಂಡು ವಿಚಾರಣೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.



Join Whatsapp