Home ಟಾಪ್ ಸುದ್ದಿಗಳು ಲೈಂಗಿಕ ದೌರ್ಜನ್ಯ: ಪ್ರಜ್ವಲ್ ಸಹೋದರ ಸೂರಜ್ ರೇವಣ್ಣ ವಿರುದ್ಧ ಎಫ್‌ಐಆರ್

ಲೈಂಗಿಕ ದೌರ್ಜನ್ಯ: ಪ್ರಜ್ವಲ್ ಸಹೋದರ ಸೂರಜ್ ರೇವಣ್ಣ ವಿರುದ್ಧ ಎಫ್‌ಐಆರ್

ಹಾಸನ: ಪ್ರಜ್ವಲ್ ರೇವಣ್ಣ ಸಹೋದರ, ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಯುವಕನೋರ್ವನಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿದೆ.

ಯುವಕ ನೀಡಿದ ದೂರನ್ನು ಆಧಾರದಲ್ಲಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಾಯ್ದೆ ಸಂಖ್ಯೆ 1860ರ ಅಡಿಯಲ್ಲಿರುವ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ ) ಹಾಗೂ 506 (ಬೆದರಿಕೆ)ಯಡಿ ಪ್ರಕರಣ ದಾಖಲು ಮಾಡಲಾಗಿದೆ.

ಜೆಡಿಎಸ್ ಕಾರ್ಯಕರ್ತನೇ ಆದ ಯುವಕ, ಸೂರಜ್ ರೇವಣ್ಣ ತನ್ನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸುದೀರ್ಘವಾಗಿ ಬರೆದು ಶುಕ್ರವಾರ ಡಿಜಿ ಕಛೇರಿಯಲ್ಲಿ ದೂರು ನೀಡಿದ್ದರು. ಹಾಸನ ಎಸ್‌ಪಿಗೂ ದೂರಿನ ಪ್ರತಿ ಇ-ಮೇಲ್ ಮೂಲಕ ಕಳಿಸಿದ್ದರು.

Join Whatsapp
Exit mobile version