ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಆರೋಪಿಗೆ 20 ವರ್ಷ ಕಠಿಣ ಸಜೆ

Prasthutha|

ಶಿವಮೊಗ್ಗ: ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಯುವಕನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50,000 ದಂಡ ವಿಧಿಸಿ  ಆದೇಶಿಸಿದೆ. ದಂಡ ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿಯಾಗಿ ಆರು ತಿಂಗಳು ಜೈಲು ಶಿಕ್ಷೆಯನ್ನೂ ವಿಧಿಸಲಾಗಿದೆ.

- Advertisement -

2019ರ ಫೆಬ್ರವರಿ 10ರಂದು ಭದ್ರಾವತಿ ತಾಲೂಕಿನ ಹಳ್ಳಿಯೊಂದರಲ್ಲಿ ಲೈಂಗಿಕ ದೌರ್ಜನ್ಯ  ಪ್ರಕರಣ ನಡೆದಿತ್ತು. ಬಾಲಕಿ ಮನೆಯ ಮುಂದೆ ಆಟವಾಡುತ್ತಿದ್ದಾಗ ಚಾಕೊಲೆಟ್ ಕೊಡಿಸುವ ನೆಪದಲ್ಲಿ ಲಿಂಗರಾಜ ಅಲಿಯಾಸ್ ನವೀನ್ (18) ಎಂಬಾತ ಕರೆದೊಯ್ದು ಕೃತ್ಯ ಎಸಗಿದ್ದ.

ಈ ಬಗ್ಗೆ ಬಾಲಕಿಯ ಹೆತ್ತವರು ನೀಡಿದ ದೂರನ್ನಾಧರಿಸಿ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದರು. ತನಿಖೆ ನಡೆಸಿದ್ದ ಸಿಪಿಐ ಯೋಗೇಶ್ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.

- Advertisement -

ಈ ಬಗ್ಗೆ ವಿಚಾರಣೆ ನಡೆಸಿದ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜೆ.ಎಸ್ ಮೋಹನ್ ಆರೋಪಿಯ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆವಿಧಿಸಿದ್ದಾರೆ. ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ವಾದಿಸಿದರು.

Join Whatsapp