Home ಟಾಪ್ ಸುದ್ದಿಗಳು ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಕಾರಾಗೃಹ ಶಿಕ್ಷೆ

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಕಾರಾಗೃಹ ಶಿಕ್ಷೆ

ಶಿವಮೊಗ್ಗ : ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ವ್ಯಕ್ತಿಗೆ ಪೋಕ್ಸೋ ಕಾಯ್ದೆಯಡಿ10 ವರ್ಷ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ.


ಜಿಲ್ಲಾ ಹೆಚ್ಚುವರಿ ಹಾಗೂ ಸತ್ರ ನ್ಯಾಯಲಯದ ಫಾಸ್ಟ್ ಟ್ರಾಕ್ ಕೋರ್ಟ್ನಲ್ಲಿ ವಿಚಾರಣೆ ನಡೆಸಿದ ನ್ಯಾಯಧೀಶರಾದ ಮೋಹನ್.ಜೆ.ಎಸ್ ಅವರು ಆರೋಪಿ ಮಾಡಿದ‌ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿದ್ದಾರೆ.

2018 ರಲ್ಲಿ ಸೊರಬ ತಾಲೂಕಿನ ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತಪ್ಪ (45) ಎಂಬ ವ್ಯಕ್ತಿ 14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಬಗ್ಗೆ ದೂರು ದಾಖಲಾಗಿತ್ತು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.


ಹನುಮಂತಪ್ಪನಿಗೆ 10 ವರ್ಷ ಕಾರಾಗೃಹ ಶಿಕ್ಷೆ ಹಾಗೂ 60 ಸಾವಿರ ರೂ ದಂಡ ವಿಧಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದು ದಂಡ ಕಟ್ಟಲು ಸಾಧ್ಯವಾಗದೇ ಇದ್ದಲ್ಲಿ ಹೆಚ್ಚುವರಿ 6 ತಿಂಗಳು ಸಾದಾ ಕಾರಾಗೃಹ ಶಿಕ್ಷೆ ನೀಡಿ ಆದೇಶ ಹೊರಡಿಸಿದ್ದಾರೆ.

Join Whatsapp
Exit mobile version