ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸು ದಾಖಲು ಮಾಡಲಾಗಿದೆ.
ಸಂತ್ರಸ್ತ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.
ಫೋಕ್ಸೋ ಕಾಯ್ದೆ ಸೆಕ್ಷನ್ 8, ಮತ್ತು ಐಪಿಸಿ ಸೆಕ್ಷನ್ 354(a) ಅಡಿ ಪ್ರಕರಣ ದಾಖಲಾಗಿದೆ. ಯಡಿಯೂರಪ್ಪ ಬಂಧನ ಸಾಧ್ಯತೆ ಇದೆ ಎನ್ನಲಾಗಿದೆ.
ಫೆಬ್ರುವರಿ 2ರಂದು ಬಾಲಕಿ ಮಾಜಿ ಸಿಎಂ ಯಡಿಯೂರಪ್ಪ ಬಳಿಗೆ ಸಹಾಯ ಕೇಳಲು ಹೋಗಿದ್ದ ವೇಳೆ ಅವರು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಎಫ್ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
ಕಾನೂನು ಪ್ರಕಾರ, ಪೋಕ್ಸೋ ಪ್ರಕರಣ ದಾಖಲಾದರೆ ಆರೋಪಿ ಎಷ್ಟೇ ಪ್ರಭಾವಿ ಆಗಿದ್ದರೂ ಕೂಡಲೇ ಬಂಧಿಸಿ ತನಿಖೆ ನಡೆಸಬೇಕಾಗುತ್ತದೆ. ಆದ್ದರಿಂದ ಯಡಿಯೂರಪ್ಪ ಅವರನ್ನು ಶೀಘ್ರದಲ್ಲೇ ಬಂಧಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಮಾಜಿ ಸಿಎಂ ಯಡಿಯೂರಪ್ಪ ಪ್ರಸ್ತುತ ಬಿಜೆಪಿಯ ಸಂಸದೀಯ ಮಂಡಲಿ ಸದಸ್ಯರಾಗಿದ್ದಾರೆ.