ದಲಿತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಪ್ರಭಾವಿ ಬಿಜೆಪಿ ಮುಖಂಡನನ್ನು ಬಂಧಿಸಿ ಸೂಕ್ತ ಕ್ರಮಕೈಗೊಳ್ಳಿ: WIM ಆಗ್ರಹ

- Advertisement -

ಬಂಟ್ವಾಳ: ಎಸ್ ಎಸ್ ಎಲ್ ಸಿ ಓದುತ್ತಿರುವ ದಲಿತ ಬಾಲಕಿಯ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯವನ್ನು ವಿಮ್ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ.

- Advertisement -

ಸಂತ್ರಸ್ಥೆ ಬಾಲಕಿಯ ಪೋಷಕರು ಆರೋಪಿಗೆ ಸೇರಿದ ತೋಟದಲ್ಲಿ. ಜೀವನೋಪಾಯಕ್ಕೆ ಕೂಲಿ ಕೆಲಸ ಮಾಡುತ್ತಿದ್ದರು. ಆ ಸಮಯದಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ. ಬಾಲಕಿ ತನ್ನ ಮೇಲಿನ ಲೈಂಗಿಕ ದೌರ್ಜನ್ಯದಿಂದಾಗಿ ಮಾನಸಿಕವಾಗಿ ಕುಂದಿದ್ದು ಎರಡು ತಿಂಗಳಿನಿಂದ ಶಾಲೆಗೆ ಪರೀಕ್ಷೆಗೂ ಹೋಗಿಲ್ಲವೆಂದಾದರೆ ಸಂತ್ರಸ್ಥೆಯ ಅಳಲು ಆಕೆಯನ್ನು ಕಟ್ಟಿಹಾಕಿರುತ್ತದೆ. ದೂರು ನೀಡಿ ಎರಡು ತಿಂಗಳುಗಳು ಕಳೆದರೂ ಆರೋಪಿಯ ಭಂಧನದ ಗೋಜಿಗೆ ಹೋಗದಿರುವುದು ಪ್ರಭಾವಿ ಆರೋಪಿಯ ರಕ್ಷಣೆಯ ಕಾರ್ಯ ನಡೆಯುತ್ತಿದೆಯೇ ಎಂದು ವಿಮ್ ಗ್ರಮಾಂತರ ಜಿಲ್ಲಾಧ್ಯಕ್ಷೆ ನೌರೀನ್ ಆಲಂಪಾಡಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಆರೋಪಿ ಬಿಜೆಪಿ ಮುಖಂಡ ಮಹೇಶ್ ಭಟ್ ಬಂಟ್ವಾಳದ ಪೆರುವಾಯಿಯವನಾಗಿದ್ದು, ಜಿಲ್ಲೆಯ ಪ್ರಭಾವಿ ವ್ಯಕ್ತಿಯಾಗಿದ್ದು ಈ ಕೃತ್ಯವನ್ನು ಮುಚ್ಚಿಹಾಕಲು ಪೋಲೀಸರು ಯತ್ನಿಸುತ್ತಿದ್ದಾರೆ. ತಡವಾಗಿ ಪ್ರಕರಣ ದಾಖಲಿಸಲಾಗಿದೆ ಎಂಬ ಸ್ಥಳೀಯರ ಆಕ್ರೋಶಕ್ಕೆ ಪೊಲೀಸರು ಮಣಿದಿದ್ದಾರೆಯೇ ಎಂದು ಸಂಶಯ ಮೂಡುತ್ತಿದೆ ಎಂದು ಅವರು ಹೇಳಿದ್ದಾರೆ.

- Advertisement -

ಆರೋಪಿ ಎಷ್ಟೇ ಪ್ರಭಾವಿಯಾಗಿದ್ದರು ಕೂಡಾ ಪೊಲೀಸರು ಸಂತ್ರಸ್ಥೆಗೆ ನ್ಯಾಯಕೊಡಿಸಿ ಆರೋಪಿಯನ್ನು ಈ ಕೂಡಲೇ ಪತ್ತೆ ಹಚ್ಚಿ ಹೆಡೆಮುರಿ ಕಟ್ಟಿ ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕಾಗಿ ಪತ್ರಿಕಾ ಪ್ರಕಟನೆಯ ಮೂಲಕ ಒತ್ತಾಯಿಸಿದ್ದಾರೆ. ಇಲ್ಲವಾದಲ್ಲಿ ವಿಮ್ ಜಿಲ್ಲಾಸಮಿತಿ ಜಿಲ್ಲೆಯಾದ್ಯಂತ ತೀವ್ರ ಹೋರಾಟವನ್ನ ಕೈಗೊಳ್ಳಲಿಕ್ಕಿದೆ ಎಂದು ಅವರು ತಿಳಿಸಿದ್ದಾರೆ.

- Advertisement -


Must Read

Related Articles