ಉಪನ್ಯಾಸಕಿ ಮೇಲೆ ಲೈಂಗಿಕ ದೌರ್ಜನ್ಯ : ಪ್ರಾಂಶುಪಾಲ ಶರಣಪ್ಪ ಅಮಾನತು

Prasthutha|

ಬಳ್ಳಾರಿ: ಜಿಲ್ಲೆಯ ಪ್ರತಿಷ್ಠಿತ ಎಎಸ್‌ಎಂ ಮಹಿಳಾ ವಿದ್ಯಾಲಯದ ಉಪನ್ಯಾಸಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜು ಪ್ರಾಂಶುಪಾಲ ಶರಣಪ್ಪನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

- Advertisement -

ಮಹಿಳಾ ವಿದ್ಯಾಲಯದ ಉಪನ್ಯಾಸಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದು ಮಾತ್ರವಲ್ಲದೇ, ಯಾರಿಗೂ ಹೇಳದಂತೆ ಬೆದರಿಕೆ ಕೂಡ ಹಾಕಿದ್ದ. ಇದರಿಂದ ನೊಂದ ಉಪನ್ಯಾಸಕಿ ನಗರದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿ, ಕ್ರಮಕ್ಕೆ ಒತ್ತಾಯಿಸಿದ್ದರು.

ಈ ಬೆನ್ನಲ್ಲೇ ಘಟನೆ ಕುರಿತು ವೀರಶೈವ ವಿದ್ಯಾವರ್ಧಕ ಸಂಘದ ಕಚೇರಿಯಲ್ಲಿ ಅಧ್ಯಕ್ಷ ಆರ್. ರಾಮನಗೌಡ ಅವರ ಅಧ್ಯಕ್ಷತೆಯಲ್ಲಿ ತುರ್ತು ಕಾರ್ಯಕಾರಿ ಸಭೆ ನಡೆಸಿ ಶರಣಪ್ಪ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧರಿಸಿತು.

- Advertisement -

ಕಾಲೇಜು ಉಪನ್ಯಾಸಕಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಕುರಿತು ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸ್ ವಿಚಾರಣೆ ಪೂರ್ತಿ ಆಗುವವರೆಗೂ ಶರಣಪ್ಪನನ್ನು ಅಮಾನತಿನಲ್ಲಿಡಲು ಆಡಳಿತ ಮಂಡಳಿ ನಿರ್ಧಾರ ಮಾಡಿದೆ. ಹಾಗಾಗಿ ಶುಕ್ರವಾರದಿಂದಲೇ (ಜೂನ್‌ 9) ಶರಣಪ್ಪನನ್ನ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.