ಬೆಂಗಳೂರು: ಯುವಕನೋರ್ವನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಕೇರಳ ಸಿನಿಮಾ ನಿರ್ದೇಶಕ ರಂಜಿತ್ ಬಾಲಕೃಷ್ಣನ್ ವಿರುದ್ಧ ಪ್ರಕರಣ ದಾಖಲಾಗಿದೆ.
ಪಂಚತಾರಾ ಹೊಟೆಲ್ ಒಂದರಲ್ಲಿ ತಮ್ಮ ವಿರುದ್ಧ ರಂಜಿತ್ ಬಾಲಕೃಷ್ಣನ್ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 31 ವರ್ಷದ ಯುವಕ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.
ಎಫ್ಐಆರ್ ಪ್ರಕಾರ, 2012 ರಲ್ಲಿ ಬಾಲಕೃಷ್ಣನ್ ಬರೆದು ನಿರ್ಮಿಸಿದ, ಬವುಟ್ಟಿಯುದೇ ನಮತಿಲ್’ ಚಿತ್ರದ ಚಿತ್ರೀಕರಣದ ವೇಳೆ ಕೋಝಿಕ್ಕೋಡ್ನಲ್ಲಿ ನಟ ಮಮ್ಮುಟ್ಟಿ ಅವರನ್ನು ಭೇಟಿಯಾಗಲು ಹೋದಾಗ ರಂಜಿತ್ ಬಾಲಕೃಷ್ಣನ್ ಅವರನ್ನೂ ಭೇಟಿ ಮಾಡಿದ್ದು, ಈ ಘಟನೆ ನಡೆದಿದೆ ಎಂದು ದೂರುದಾರರು ಆರೋಪಿಸಿದ್ದಾರೆ.
ಮೊದಲು ಕೇರಳದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು ಆದರೆ ಇಲ್ಲಿನ ಪಂಚತಾರಾ ಹೋಟೆಲ್ನಲ್ಲಿ ಲೈಂಗಿಕ ದೌರ್ಜನ್ಯದ ಘಟನೆ ನಡೆದಿರುವ ಕಾರಣ ಪ್ರಕರಣವನ್ನು ಬೆಂಗಳೂರಿಗೆ ವರ್ಗಾಯಿಸಲಾಗಿದೆ ಮತ್ತು ಇದೀಗ ಎಫ್ಐಆರ್ ದಾಖಲಿಸಲಾಗಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.