ರ್‍ಯಾಪಿಡೋ ಚಾಲಕನಿಂದ ಲೈಂಗಿಕ ಕಿರುಕುಳ: ಬೇಸತ್ತ ಯುವತಿ ಬೈಕ್‌’ನಿಂದ ಜಂಪ್‌

Prasthutha|

ಬೆಂಗಳೂರು: ರ್‍ಯಾಪಿಡೋ ಬೈಕ್ ಸವಾರನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ಚಲಿಸುತ್ತಿದ್ದ ಬೈಕ್ ನಿಂದಲೇ ಜಿಗಿದಿರುವ ಘಟನೆ ಯಲಹಂಕದ ಹೊರವಲಯದಲ್ಲಿ ನಡೆದಿದೆ.

- Advertisement -


ಬಂಧಿತ ಆರೋಪಿಯನ್ನು ಆಂಧ್ರಪ್ರದೇಶ ಮೂಲದ ದೀಪಕ್ ರಾವ್ ಎಂದು ಗುರುತಿಸಲಾಗಿದೆ.


ಖಾಸಗಿ ಕಂಪನಿಯಲ್ಲಿ ಆರ್ಕಿಟೆಕ್ಚರ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ಇದೇ ತಿಂಗಳ ಏಪ್ರಿಲ್ 21 ರಂದು ಯಲಹಂಕದಿಂದ ಇಂದಿರಾನಗರಕ್ಕೆ ತೆರಳಲು ರ್‍ಯಾಪಿಡೋ ಬುಕ್ ಮಾಡಿದ್ದಾಳೆ. ಬೈಕ್ ಸವಾರ ಓಟಿಪಿ ಪಡೆಯುವ ನೆಪದಲ್ಲಿ ಮೊಬೈಲ್ ಕಸಿದಿದ್ದಾನೆ. ಬಳಿಕ ಯುವತಿಗೆ ಲೈಂಗಿಕ ಕಿರುಕುಳ ನೀಡಲು ಆರಂಭಿಸಿದ್ದಾನೆ. ಇದರಿಂದ ಬೇಸತ್ತ ಯುವತಿ ಚಲಿಸುತ್ತಿದ್ದ ಬೈಕ್ ನಿಂದ ಜಿಗಿದಿದ್ದಾಳೆ. ನಂತರ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದಾಳೆ.

Join Whatsapp