ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಅವರು ಭಾರತೀಯ ಕುಸ್ತಿ ಫೆಡರೇಷನ್ ನ (ಡಬ್ಲ್ಯುಎಫ್ಐ) ನೂತನ ಅಧ್ಯಕ್ಷರಾಗಿ ಗುರುವಾರ ಆಯ್ಕೆಯಾಗಿದ್ದಾರೆ.
ಇಂದು ನಡೆದ ಚುನಾವಣೆಯಲ್ಲಿ ಸಂಜಯ್ ಸಿಂಗ್ ಗುಂಪಿನ ಹಲವರು ಡಬ್ಲ್ಯುಎಫ್ಐನ ಪ್ರಮುಖ ಸ್ಥಾನಗಳಿಗೆ ಆಯ್ಕೆಯಾಗಿದ್ದಾರೆ. ಉತ್ತರ ಪ್ರದೇಶ ಕುಸ್ತಿ ಸಂಸ್ಥೆಯ ಉಪಾಧ್ಯಕ್ಷರಾಗಿರುವ ಸಂಜಯ್ ಅವರು, 40 ಮತಗಳನ್ನು ಗಳಿಸುವ ಮೂಲಕ ಪ್ರಮುಖ ಎದುರಾಳಿ ಅನಿತಾ ಶೆರಾಣ್ ಅವರನ್ನು ಮಣಿಸಿದರು. ಆದಾಗ್ಯೂ ಅನಿತಾ ಅವರ ಆಪ್ತ ಪ್ರೇಮ್ಚಂದ್ ಲೊಚಬ್ ಅವರು ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.