Home ಟಾಪ್ ಸುದ್ದಿಗಳು ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳದ ಬಗ್ಗೆ ತನಿಖೆ ಆಗಬೇಕು: ಸಿಎಂಗೆ ಪತ್ರ

ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳದ ಬಗ್ಗೆ ತನಿಖೆ ಆಗಬೇಕು: ಸಿಎಂಗೆ ಪತ್ರ

ಬೆಂಗಳೂರು: ಮಾಲಿವುಡ್ ಸಿನಿಮಾರಂಗದಲ್ಲಿ ಹೇಮಾ ಸಮಿತಿ ವರದಿ ಬಳಿಕ ನಟರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿ ಬರುತ್ತಿದೆ. ಕೆಲ ಕಲಾವಿದರ ವಿರುದ್ಧ ದೂರು ಕೂಡ ದಾಖಲಾಗಿದೆ.

ಇತ್ತ ಮಾಲಿವುಡ್ ಬಳಿಕ ಟಾಲಿವುಡ್, ಕಾಲಿವುಡ್ ಹಾಗೂ ಸ್ಯಾಂಡಲ್ ವುಡ್ನ ಕೆಲ ಕಲಾವಿದರು ಕೂಡ ಹೇಮಾ ಸಮಿತಿಯಂತೆ ತಮ್ಮ ಚಿತ್ರರಂಗದಲ್ಲೂ ಒಂದು ಸಮಿತಿ ರಚನೆ ಆಗಬೇಕೆಂದು ಒಂದಾಗಿ ಧ್ವನಿಗೂಡಿಸಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಮಹಿಳಾ ಕಲಾವಿದರು ಎದುರಿಸುತ್ತಿರುವ ಲೈಂಗಿಕ ಕಿರುಕುಳ ಸೇರಿದಂತೆ ಇತರೆ ಸಮಸ್ಯೆಗಳ ಕುರಿತು ಅಧ್ಯಯನ ಮಾಡಿ ವರದಿ ಸಲ್ಲಿಸಲು ಒಂದು ಸಮಿತಿ ರಚನೆ ಆಗಬೇಕೆಂದು ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ(ಫೈರ್) ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಆಗ್ರಹಿಸಿದೆ.

Join Whatsapp
Exit mobile version