Home ಟಾಪ್ ಸುದ್ದಿಗಳು ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ: ವಿಶೇಷ ತನಿಖಾ ತಂಡ ರಚನೆ

ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ: ವಿಶೇಷ ತನಿಖಾ ತಂಡ ರಚನೆ

ತಿರುವನಂತಪುರಂ: ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳದ ಅನುಭವವನ್ನು ಬಹಿರಂಗವಾದ ಬೆನ್ನಲ್ಲೇ ಈ ಬಗ್ಗೆ ತನಿಖೆ ನಡೆಸಲು ವಿಶೇಷ ತಂಡವನ್ನು ಕೇರಳ ಸರ್ಕಾರ ರಚಿಸಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಿರಿಯ ಪೊಲೀಸ್ ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆಸಿದ ನಂತರ, ಏಳು ಸದಸ್ಯರ ತಂಡವನ್ನು ರಚಿಸಲಾಗಿದೆ.

ಐಜಿ ಸ್ಪರ್ಜನ್ ಕುಮಾರ್ ನೇತೃತ್ವದ ವಿಶೇಷ ತಂಡದಲ್ಲಿ ನಾಲ್ವರು ಹಿರಿಯ ಮಹಿಳಾ ಐಪಿಎಸ್ ಅಧಿಕಾರಿಗಳು ಇರಲಿದ್ದಾರೆ.

2017ರಲ್ಲಿ ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟಿಯೊಬ್ಬರ ಲೈಂಗಿಕ ದೌರ್ಜನ್ಯದ ನಂತರ, ಕೇರಳ ಸರಕಾರವು ನಿವೃತ್ತ ನ್ಯಾಯಮೂರ್ತಿ ಕೆ ಹೇಮಾ ಸಮಿತಿಯನ್ನು ನೇಮಿಸಿತು. ಈ ಸಮಿತಿ ವರದಿಯು ಮಲಯಾಳಂ ಚಿತ್ರರಂಗದಲ್ಲಿ ಕೆಲಸ ಮಾಡುವ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಹಿರಂಗಪಡಿಸಿದ್ದು, ಇದರ ಬಳಿಕ ನಿರ್ದೇಶಕ ರಂಜಿತ್ ಅವರು ಕೇರಳ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದಾರೆ ಮತ್ತು ನಟ ಸಿದ್ದೀಕ್ ಮಲಯಾಳಂ ಚಲನಚಿತ್ರ ಕಲಾವಿದರ ಸಂಘ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Join Whatsapp
Exit mobile version