ಕಡಬ ಪೊಲೀಸ್ ಸಿಬ್ಬಂದಿಯ ಲೈಂಗಿಕ ದೌರ್ಜನ್ಯ | ದೂರು ನೀಡಿದರೆ ಕ್ರಮ: ಡಿವೈಎಸ್ಪಿ

Prasthutha|

ಕಡಬ: ಯುವತಿಯೊಬ್ಬಳಿಗೆ ಪೊಲೀಸ್ ಸಿಬ್ಬಂದಿಯೊಬ್ಬ ಲೈಂಗಿಕ ದೌರ್ಜನ್ಯವೆಸಗಿ, ನಂತರದಲ್ಲಿ ತನ್ನ ಪ್ರಾಬಲ್ಯದಿಂದ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ಮಾಡಿದ್ದಾನೆ ಎಂಬ ಗಂಭೀರ ಪ್ರಕರಣವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಪುತ್ತೂರು ಡಿವೈಎಸ್ಪಿ ಡಾ.ಗಾನಾ ಪಿ.ಕುಮಾರ್ ಕಡಬ ಪೊಲೀಸ್ ಠಾಣೆಗೆ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ. 

ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಪುತ್ತೂರು ಡಿವೈಎಸ್ಪಿ, ಪೊಲೀಸ್ ಸಿಬ್ಬಂದಿಯೋರ್ವ ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯನ್ನು ಗರ್ಭವತಿಯನ್ನಾಗಿಸಿ, ಬಳಿಕ ಗರ್ಭಪಾತ ಮಾಡಿಸಿದ್ದಾನೆ ಎನ್ನುವ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಗಮನಕ್ಕೆ ಬಂದಿದೆ. ವಿಷಯಕ್ಕೆ ಸಂಬಂಧಿಸಿ ಸಂತ್ರಸ್ತೆ ಅಥವಾ ಸಾರ್ವಜನಿಕರು ಹೆಸರು ಉಲ್ಲೇಖ ಮಾಡಿ ದೂರು ನೀಡಿದರೆ ತನಿಖೆ ನಡೆಸಿ ಆರೋಪಿ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದರು.

- Advertisement -