Home ರಾಷ್ಟ್ರೀಯ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ಅತ್ಯಂತ ನಾಚಿಕೆಗೇಡಿನ ಸಂಗತಿ: ಕೇಜ್ರಿವಾಲ್

ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ಅತ್ಯಂತ ನಾಚಿಕೆಗೇಡಿನ ಸಂಗತಿ: ಕೇಜ್ರಿವಾಲ್

ನವದೆಹಲಿ: ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್’ಐ) ಅಧ್ಯಕ್ಷ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದು, ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶುಕ್ರವಾರ ಹೇಳಿದ್ದಾರೆ.

ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿರುವ ಕುಸ್ತಿಪಟುಗಳು ದೆಹಲಿಯ ಜಂತರ್ ಮಂಥರ್’ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

‘ಮಹಿಳಾ ಕ್ರೀಡಾಪಟುಗಳು ಹರಿಯಾಣದ ಸಚಿವರಿಂದ ಹಿಡಿದು ಡಬ್ಲ್ಯುಎಫ್’ಐ ಅಧ್ಯಕ್ಷರವರೆಗೆ ಗಂಭೀರ ಆರೋಪ ಹೊರಿಸಿದ್ದಾರೆ. ಅವರ ವಿರುದ್ಧ ಯಾವುದೇ ಕ್ರಮ ಕೈಕೊಂಡಿಲ್ಲ. ದೇಶದ ಮಹಿಳಾ ಕ್ರೀಡಾಪಟುಗಳ ಭದ್ರತೆ ವಿಚಾರದಲ್ಲಿ ಅವರ ಪಕ್ಷ ಮತ್ತು ಸರ್ಕಾರ ನಾಯಕರನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ. ಇದು ಅತ್ಯಂತ ನಾಚಿಕೆಗೇಡಿನ ಸಂಗತಿ’ ಎಂದು ಕೇಜ್ರಿವಾಲ್ ಹೇಳಿದರು.

Join Whatsapp
Exit mobile version