ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಭರ್ಜರಿ ಓಪನಿಂಗ್

Prasthutha|

ಅಟ್ಲಿ ನಿರ್ದೇಶನದ ‘ಜವಾನ್’ ಸಿನಿಮಾ ಇಂದು ಭರ್ಜರಿ ಓಪನಿಂಗ್ ಪಡೆದುಕೊಂಡಿದೆ.

- Advertisement -

ಶಾರುಖ್ ಖಾನ್ ಅಭಿಮಾನಿಗಳು ಈ ಸಿನಿಮಾವನ್ನು ಗ್ರ್ಯಾಂಡ್ ಆಗಿ ಬರಮಾಡಿಕೊಂಡಿದ್ದಾರೆ. ಪ್ರೇಕ್ಷಕರು ಚಿತ್ರಮಂದಿರದಿಂದ ಹೊರಬರುತ್ತಿದ್ದಂತೆಯೇ ‘ಜವಾನ್’ ಸಿನಿಮಾವನ್ನು ಬ್ಲಾಕ್ ಬಸ್ಟರ್ ಎಂದು ಘೋಷಿಸುತ್ತಿದ್ದಾರೆ. ಶಾರುಖ್ ಖಾನ್, ದೀಪಿಕಾ ಪಡುಕೋಣೆ, ವಿಜಯ್ ಸೇತುಪತಿ, ನಯನತಾರಾ ಮುಂತಾದ ಕಲಾವಿದರ ನಟನೆಗೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

‘ಈ ಇಡೀ ವರ್ಷ ಶಾರುಖ್ ಖಾನ್ ಅವರಿಗೆ ಸೇರಿದ್ದು. ಜವಾನ್ ಸಿನಿಮಾವನ್ನು ಮಿಸ್ ಮಾಡಿಕೊಳ್ಳಬೇಡಿ’ ಎಂದು ಅಭಿಮಾನಿಯೊಬ್ಬರು ಟ್ವೀಟ್ ಮಾಡಿದ್ದಾರೆ.

Join Whatsapp