ಡ್ರಗ್ಸ್ ಪ್ರಕರಣ: ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬಂಧನ !

Prasthutha|

ಮುಂಬೈ:  ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರನ್ನು ಎನ್ ಸಿ ಬಿ ಅಧಿಕಾರಿಗಳು ಬಂಧಿಸಿದ್ದಾರೆ.

- Advertisement -

ಮುಂಬೈನ ಎನ್ ಸಿಬಿ ಅಧಿಕಾರಿಗಳು ಆರ್ಯನ್ ಖಾನ್ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.  ಅರ್ಬಾಜ್ ಹಾಗೂ ಇನ್ನೋರ್ವನನ್ನು ಎನ್ ಸಿ ಬಿ ಅಧಿಕಾರಿಗಳು ಬಂಧಿಸಿದ್ದು, ಬಂಧಿತರನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಾಗುತ್ತಿದೆ.

ಮುಂಬೈನ ಸಮುದ್ರದ ಮಧ್ಯೆ ಐಷಾರಾಮಿ ಹಡಗಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ನಿನ್ನೆ ತಡರಾತ್ರಿ ಎನ್ ಸಿ ಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಡ್ರಗ್ಸ್ ಸೇವನೆಯಲ್ಲಿ ತೊಡಗಿದ್ದ 8 ಜನರನ್ನು ವಶಕ್ಕೆ ಪಡೆಯಲಾಗಿತ್ತು. ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಹಲವು ಹೈ ಪ್ರೊಫೈಲ್ ಉದ್ಯಮಿಗಳು, ಸೆಲೆಬ್ರಿಟಿಗಳ ಮಕ್ಕಳನ್ನು ವಶಕ್ಕೆ ಪಡೆಯಲಾಗಿತ್ತು.

Join Whatsapp