ಆಗ್ರಾ: ದೆಹಲಿಯ ಶಾಹೀನ್ ಬಾಗ್ ನಲ್ಲಿ ನಡೆದ ಸಿ.ಎ.ಎ – ಎನ್.ಆರ್.ಸಿ ವಿರುದ್ಧದ ಹೋರಾಟದಲ್ಲಿ ಪಾಲ್ಗೊಂಡು ಗಮನ ಸೆಳೆದ ಹೋರಾಟಗಾರ್ತಿ ಬಿಲ್ಕಿಸ್ ಬಾನು ಮತ್ತು ಉಯಿಘರ್ ಅರ್ಥಶಾಸ್ತ್ರ ಪ್ರಾಧ್ಯಾಪಕರಾದ ಇಲ್ಹಾಮ್ ಟೋಥಿ ಎಂಬವರು ಜಾಗತಿಕ 500 ಪ್ರಭಾವಿ ಮುಸ್ಲಿಮರ ಪೈಕಿ ಅಗ್ರ ಸ್ಥಾನವನ್ನು ಅಲಂಕರಿಸಿದ್ದಾರೆ.
ಬಿಲ್ಕಿಸ್ ಬಾನು ಅವರು 2021 ರ ಸಾಲಿನ ಪ್ರಭಾವಿಗಳ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಅವರು ದೆಹಲಿಯ ಶಾಹೀನ್ ಬಾಗ್ ನಲ್ಲಿರುವ ಕೇಂದ್ರ ಸರ್ಕಾರ ಜಾರಿಗೆ ತಂದ ಪೌರತ್ವ ತಿದ್ದುಪಡಿ ಕಾಯ್ದೆ (ಸಿ.ಎ.ಎ) ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ (ಎನ್.ಆರ್.ಸಿ) ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು.
ಪ್ರಾರಂಭದಲ್ಲಿ ಕೆಲವು ಮುಸ್ಲಿಮ್ ಮಹಿಳೆಯರು ಬಾನು ಅವರ ನೇತೃತ್ವದಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಜಾಗೃತಿ ಹೆಚ್ಚಾದಂತೆ ವಿವಿಧ ಧರ್ಮಗಳು, ಜಾತಿಗಳು ಮತ್ತು ವಯೋವೃದ್ಧರು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.