ಶಾಹಿ ಈದ್ಗಾ ಮಸೀದಿ ಸಮೀಕ್ಷೆ: ಅಲಹಾಬಾದ್ ಹೈ ಆದೇಶವನ್ನು ಎತ್ತಿಹಿಡಿದ ಸುಪ್ರೀಂ

Prasthutha|

ನವದೆಹಲಿ: ನಿನ್ನೆ ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ದೇವಸ್ಥಾನದ ಪಕ್ಕದಲ್ಲಿರುವ ಶಾಹಿ ಈದ್ಗಾ ಮಸೀದಿ ಸಂಕೀರ್ಣದ ಸಮೀಕ್ಷೆಗೆ ಅನುಮೋದಿಸಿತ್ತು. ಹೈಕೋರ್ಟ್ ತೀರ್ಪಿನ ವಿರುದ್ಧ ಶಾಹಿ ಈದ್ಗಾ ಮಸೀದಿ ಕಮಿಟಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಇಂದು ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ತೀರ್ಪಿಗೆ ತಡೆ ನೀಡಲು ನಿರಾಕರಿಸಿದೆ.

- Advertisement -

ಶಾಹಿ ಈದ್ಗಾ ಸಂಕೀರ್ಣ ಪ್ರಕರಣದಲ್ಲಿ ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶವನ್ನು ಇಂದು ಶಾಹಿ ಈದ್ಗಾ ಮಸೀದಿ ಮತ್ತು ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಯು ಸುಪ್ರೀಂ ಕೋರ್ಟ್‌ನಲ್ಲಿ ವಾಸ್ತವಿಕವಾಗಿ ಪ್ರಶ್ನಿಸಿದೆ. ಅಷ್ಟೇ ಅಲ್ಲ, ಅಲಹಾಬಾದ್ ಹೈಕೋರ್ಟ್ ನ ಕ್ರಮಕ್ಕೆ ತಡೆ ನೀಡಬೇಕು ಎಂದು ಆಗ್ರಹಿಸಿದ್ದರು. ಇದನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ ಎಂದು ನ್ಯಾಯಾಲಯದ ತೀರ್ಪಿನ ಕುರಿತು ವಕೀಲ ವಿಷ್ಣು ಶಂಕರ್ ಜೈನ್ ತಿಳಿಸಿದರು.

ಮುಂದಿನ ವಿಚಾರಣೆ ಡಿಸೆಂಬರ್ 18 ರಂದು ನಡೆಯಲಿದೆ. ಈ ವಿಚಾರಣೆಯಲ್ಲಿ, ಸಮೀಕ್ಷೆಯನ್ನು ಯಾರು ನಡೆಸುತ್ತಾರೆ ಮತ್ತು ಅದರ ವರದಿಯನ್ನು ಯಾವಾಗ ಸಲ್ಲಿಸಬೇಕು ಎಂಬಂತಹ ಷರತ್ತುಗಳ ಮೇಲೆ ತೀರ್ಪು ನೀಡಲಾಗುವುದು ಎಂದು ವಿಷ್ಣು ಶಂಕರ್ ತಿಳಿಸಿದ್ದಾರೆ.

Join Whatsapp