ಕೇರಳದ ಮಾಜಿ ಆರೋಗ್ಯ ಸಚಿವೆ ಶೈಲಜಾ ಟೀಚರ್‌ ಗೆ ಯುರೋಪಿಯನ್‌ ಯುನಿವರ್ಸಿಟಿಯ ಪ್ರತಿಷ್ಠಿತ ʼಓಪನ್ ಸೊಸೈಟಿʼ ಪುರಸ್ಕಾರ

Prasthutha: June 19, 2021

ತಿರುವನಂತಪುರಂ : ಕೇರಳದಲ್ಲಿ ಆರೋಗ್ಯ ಸಚಿವೆಯಾಗಿ ಭಾರೀ ಸುದ್ದಿಯಲ್ಲಿದ್ದ ಮಾಜಿ ಸಚಿವೆ, ಸಿಪಿಎಂ ನಾಯಕಿ ಶೈಲಜಾ ಟೀಚರ್‌ ಗೆ ಸೆಂಟ್ರಲ್‌ ಯುರೋಪಿಯನ್‌ ಯುನಿವರ್ಸಿಟಿಯ ʼಓಪನ್‌ ಸೊಸೈಟಿ ಪ್ರೈಝ್ʼ ಪುರಸ್ಕಾರ‌ ಲಭಿಸಿದೆ. ಆಸ್ಟ್ರಿಯಾದ ವಿಯೆನ್ನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪುರಸ್ಕಾರ ನೀಡಲಾಗಿದೆ.

ಸಾರ್ವಜನಿಕ ಆರೋಗ್ಯಕ್ಕಾಗಿ ತಮ್ಮ ಸೇವೆ ಮತ್ತು ಕೇರಳದಲ್ಲಿ ಕೋವಿಡ್‌ ಸಾಂಕ್ರಾಮಿಕ ಸಂಕಷ್ಟವನ್ನು ನಿರ್ವಹಿಸಿದ ರೀತಿಗೆ ಈ ಪುರಸ್ಕಾರ ಬಂದಿದೆ. ರಾಜ್ಯದಲ್ಲಿ ಕಳೆದ ವರ್ಷ ಕೋವಿಡ್‌ ಸಾಂಕ್ರಾಮಿಕ ಪರಿಸ್ಥಿತಿಯನ್ನು ನಿರ್ವಹಿಸಿದ್ದ ಬಗ್ಗೆ ಶೈಲಜಾ ಟೀಚರ್‌ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಪ್ರಶಂಸೆಗೆ ಪಾತ್ರರಾಗಿದ್ದರು.

ಮುಕ್ತ ಸಮಾಜದಲ್ಲಿ ಉತ್ಕೃಷ್ಟ ಗುಣಮಟ್ಟದ ಸೇವೆ ಸಲ್ಲಿಸುವವರಿಗೆ ಈ ಅಂತಾರಾಷ್ಟ್ರೀಯ ಪುರಸ್ಕಾರ ನೀಡಲಾಗುತ್ತದೆ. ವಿಶ್ವವಿದ್ಯಾಲಯದ ಅಧ್ಯಕ್ಷ ಮೈಕಲ್‌ ಇಗ್ನಾಟೀಫ್‌ ಕೋವಿಡ್‌ ನಿರ್ವಹಣೆಯಲ್ಲಿ ಸಲ್ಲಿಸಿದ ಸೇವೆಯ ಬಗ್ಗೆ ಸ್ಮರಿಸಿ, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ