‘ಶಕ್ತಿ’ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

Prasthutha|

- Advertisement -

ಬೆಂಗಳೂರು: ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ. ವಿಧಾನಸೌಧ ಮುಂಭಾಗ ಶಕ್ತಿ ಯೋಜನೆ ಉದ್ಘಾಟನಾ ಸಮಾರಂಭ ನಡೆಯುತ್ತಿದೆ.

ಇಂದಿನಿಂದ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣವಿರುತ್ತದೆ. ಉಚಿತ ಪ್ರಯಾಣಕ್ಕೆ ಬಿಪಿಎಲ್​​, ಎಪಿಎಲ್​ ಎಂಬ ನಿಯಮವಿಲ್ಲ. ಯಾವುದಾದರೂ ಐಡಿ ತೋರಿಸಿದರೆ ಪ್ರಯಾಣ ಮಾಡಬಹುದು. ಸ್ಮಾರ್ಟ್​ ಕಾರ್ಡ್​ ಮಾಡಿಸಲು ಯಾರೂ ದುಡ್ಡು ಕೊಡಬೇಕಿಲ್ಲ. ಸ್ಮಾರ್ಟ್ ಕಾರ್ಡ್​​ ಮಾಡಿಸಿಕೊಳ್ಳಲು 3 ತಿಂಗಳ ಕಾಲಾವಕಾಶವಿದೆ. ಶೇ.90 ಕ್ಕಿಂತ ಹೆಚ್ಚು ಬಸ್​​ ಗಳಲ್ಲಿ ರಾಜ್ಯದ ಯಾವುದೇ ಮೂಲೆಗೆ ಮಹಿಳೆಯರು ಹೋಗಬಹುದು ಸಮಾರಂಭದಲ್ಲಿ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.




Join Whatsapp