ಬೆಂಗಳೂರು: ಶಕ್ತಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. 5 ವರ್ಷ ಯೋಜನೆ ಮುಂದುವರೆಯಲಿದೆ. ಮುಂದಿನ ಅವಧಿಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ ಅಗಲೂ ಶಕ್ತಿ ಯೋಜನೆ ಅನುಷ್ಠಾನ ಮಾಡುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಅಶ್ವಮೇಧ ಕ್ಲಾಸಿಕ್ ಬಸ್ ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಎಸ್ ಆರ್ ಟಿಸಿಯಿಂದ 100 ಹೊಸ ಬಸ್ ಗೆ ಚಾಲನೆ ನೀಡ್ತಿದ್ದೇವೆ, ಏಪ್ರಿಲ್ ಹೊತ್ತಿದೆ 1000 ಬಸ್ ಬರಲಿದೆ. ಶಕ್ತಿ ಯೋಜನೆ ಬಂದಾಗಿನಿಂದ 1 ಕೋಟಿ 10 ಲಕ್ಷ ಜನ ನಿತ್ಯ 4 ನಿಗಮದಿಂದ ಓಡಾಡುತ್ತಿದ್ದಾರೆ. ಶಾಲಾ ಮಕ್ಕಳಿಗೆ ಶಕ್ತಿಯಿಂದ ಸಮಸ್ಯೆ ಆಗುತ್ತಿದೆ. ಸಮಸ್ಯೆ ಪರಿಹಾರಕ್ಕೆ ಹೊಸ ಬಸ್ ಖರೀದಿ ಮಾಡುತ್ತಿದ್ದೇವೆ. ಆದಷ್ಟು ಬೇಗ ಸಮಸ್ಯೆ ಪರಿಹಾರ ಮಾಡುತ್ತೇವೆ ಎಂದರು.