ಸಾರಿಗೆ ಬಸ್​ನಲ್ಲಿ ಶನಿವಾರ ಒಂದೇ ದಿನ 1.05 ಕೋಟಿ ಜನ ಪ್ರಯಾಣ: ರಾಮಲಿಂಗಾರೆಡ್ಡಿ

Prasthutha|

ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿ ಮಾಡಿದ ನಂತರ ಸರ್ಕಾರಿ ಬಸ್​ಗಳನ್ನು ಪ್ರಯಾಣಿಸುವವರ ಸಂಖ್ಯೆ ಹೆಚ್ಚಳವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

- Advertisement -

ನಗರದ ಶಾಂತಿನಗರದಲ್ಲಿರುವ ಕೆಎಸ್​ಆರ್​ಟಿಸಿ ಕೇಂದ್ರ ಕಚೇರಿಯಲ್ಲಿ ವಿವಿಧ ಸಾರಿಗೆ ಇಲಾಖೆಗಳ ಎಂಡಿಗಳ ಜೊತೆ ಶನಿವಾರ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಶಕ್ತಿ ಯೋಜನೆ ಯಶಸ್ವಿಯಾಗಿದೆ. ಶಕ್ತಿ ಯೋಜನೆ ಜಾರಿಗೂ ಮೊದಲು 84.15 ಲಕ್ಷ ಜನ ಪ್ರಯಾಣ ಮಾಡುತ್ತಿದ್ದರು. ಶನಿವಾರ ಒಂದೇ ದಿನ 1.05 ಕೋಟಿ ಜನ ಪ್ರಯಾಣ ಮಾಡಿದ್ದಾರೆ ಎಂದರು.

ಶಕ್ತಿ ಯೋಜನೆಯಿಂದ ಸಾರ್ವಜನಿಕ ಸಾರಿಗೆಗೆ ಬಲ ನೀಡಿದಂತಾಗಿದೆ. ಈ‌ ಯೋಜನೆ ಜಾರಿಗೆ ಮೊದಲು ಸಾರಿಗೆ ಸಂಸ್ಥೆಗಳ‌‌ ಒಟ್ಟು ಪ್ರಯಾಣಿಕರ‌ ಸಂಖ್ಯೆ ಪ್ರತಿದಿನ ಸರಾಸರಿ 84.15 ಲಕ್ಷಗಳಿದ್ದು, ಶನಿವಾರ ಸರಾಸರಿ 1 ಕೋಟಿ 5 ಲಕ್ಷಗಳಾಗಿರುವುದು ಶಕ್ತಿ ಯೋಜನೆ ಯಶಸ್ವಿಯಾಗಿದೆಯೆಂದು ತಿಳಿಸಿದರು‌.

Join Whatsapp