‘ಶಕ್ತಿಯೋಜನೆ’: ಬಸ್‌ಗೆ ನಮಸ್ಕರಿಸಿ ಗಮನ ಸೆಳೆದಿದ್ದ ಮಹಿಳೆಯನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

Prasthutha|

- Advertisement -

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿದ 5 ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಿರುವ ‘ಶಕ್ತಿಯೋಜನೆ’ ಜಾರಿಯಾದ ದಿನದಂದು ಮಹಿಳೆಯೊಬ್ಬರು ಬಸ್‌ ಗೆ ನಮಸ್ಕರಿಸಿ ಬಸ್​​ ಏರಿದ್ದರು. ಆ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿತ್ತು.

ಇದೀಗ ಆ ಮಹಿಳೆಯು ಕನ್ನಡದ ಖಾಸಗಿ ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ.

- Advertisement -

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ”ಶಕ್ತಿ ಯೋಜನೆ ಜಾರಿಯಾದ ದಿನ ಅತ್ಯಂತ ಸಂತಸದಿಂದ ಸರ್ಕಾರಿ ಬಸ್ಸಿನ ಮೆಟ್ಟಿಲುಗಳಿಗೆ ನಮಸ್ಕರಿಸಿ ಪ್ರಯಾಣ ಬೆಳೆಸಿದ್ದ ಬೆಳಗಾವಿ ಜಿಲ್ಲೆಯ ಸಂಗೊಳ್ಳಿಯ ಸಂಗವ್ವ ಅವರನ್ನು ಇಂದು ಕಲರ್ಸ್ ಕನ್ನಡದ ಅನುಬಂಧ ಅವಾರ್ಡ್ ಕಾರ್ಯಕ್ರಮದಲ್ಲಿ ಭೇಟಿಯಾದದ್ದು ನನ್ನಲ್ಲಿ ಅಚ್ಚರಿ ಮತ್ತು ಖುಷಿಯ ಜೊತೆಗೆ ಸಾರ್ಥಕ್ಯದ ಭಾವ ಮೂಡಿಸಿತು” ಎಂದಿದ್ದಾರೆ.

ಮಹಿಳೆಯರ ಸಬಲೀಕರಣಕ್ಕೆ ನಾವು ಬೆಂಬಲವಾಗಿ ನಿಲ್ಲಬೇಕು ಎನ್ನುವ ಕಾಳಜಿಯಿಂದ ಜಾರಿಗೆ ತಂದಿರುವ ಶಕ್ತಿ ಯೋಜನೆಯ ಮೊದಲ ದಿನವೇ ಸಂಗವ್ವ ಅವರಿಂದ ದೊರೆತ ಪ್ರತಿಕ್ರಿಯೆ ಕಂಡು ನಮ್ಮ ಯೋಜನೆ ನೂರಕ್ಕೆ ನೂರರಷ್ಟು ಯಶಸ್ವಿಯಾಗಲಿದೆ ಎಂಬ ಭರವಸೆ ನನ್ನಲ್ಲಿ ಮೂಡಿತ್ತು. ಈ ದಿನ ಇಂಥದ್ದೊಂದು ಭೇಟಿಯ ಅವಕಾಶ ಕಲ್ಪಿಸಿದ ಕಲರ್ಸ್‌ ಕನ್ನಡ ವಾಹಿನಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

Join Whatsapp