Home ಟಾಪ್ ಸುದ್ದಿಗಳು ಉಚಿತ ಪ್ರಯಾಣ ಒದಗಿಸುವ ‘ಶಕ್ತಿ ಯೋಜನೆ’ ಅಸಲಿ ಹಿಂದುತ್ವಕ್ಕೆ ಶಕ್ತಿ ತುಂಬಿದೆ: ಸಚಿವ ರಾಮಲಿಂಗಾ ರೆಡ್ಡಿ

ಉಚಿತ ಪ್ರಯಾಣ ಒದಗಿಸುವ ‘ಶಕ್ತಿ ಯೋಜನೆ’ ಅಸಲಿ ಹಿಂದುತ್ವಕ್ಕೆ ಶಕ್ತಿ ತುಂಬಿದೆ: ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ ಒದಗಿಸುವ ‘ಶಕ್ತಿ ಯೋಜನೆ’ ಅಸಲಿ ಹಿಂದುತ್ವಕ್ಕೆ ಶಕ್ತಿ ತುಂಬಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ರಾಮಲಿಂಗಾ ರೆಡ್ಡಿ, “ಶಕ್ತಿ ಯೋಜನೆ ಜಾರಿಯಾದ ಬಳಿಕ ರಾಜ್ಯದ ಎಲ್ಲ ಹಿಂದೂ ದೇಗುಲಗಳು, ಪುಣ್ಯ ಕ್ಷೇತ್ರಗಳು ತುಂಬಿ ತುಳುಕುತ್ತಿವೆ” ಎಂದಿದ್ದಾರೆ.
“ನಮ್ಮ ದೇವರನ್ನು ಪೂಜಿಸಿ, ಪ್ರೀತಿಸುವುದು, ಇತರ ಧರ್ಮೀಯರನ್ನು ಗೌರವಿಸುವವನೇ ನಿಜವಾದ ಹಿಂದು. ಇದು ಈಗ ಕಾಂಗ್ರೆಸ್ ಸರ್ಕಾರದಿಂದ ಸಾಧ್ಯವಾಗಿದೆ. ನೈಜ ಹಿಂದುಗಳ ರಕ್ಷಣೆ, ಅಭಿವೃದ್ಧಿಗೆ ಕಾಂಗ್ರೆಸ್ ಸದಾ ಬದ್ಧ”’ ಎಂದು ಹೇಳಿದ್ದಾರೆ.

Join Whatsapp
Exit mobile version