ಶಂಕರ್ ಮಹಾದೇವನ್, ಝಾಕೀರ್ ಹುಸೈನ್’ಗೆ ಗ್ರ್ಯಾಮಿ ಪ್ರಶಸ್ತಿ ಗರಿ

Prasthutha|

ಅಮೆರಿಕ: ಹಾಡುಗಾರ ಶಂಕರ್ ಮಹಾದೇವನ್ ಹಾಗೂ ಝಾಕೀರ್ ಹುಸೈನ್ ಅವರ ‘ಶಕ್ತಿ ಬ್ಯಾಂಡ್’ ಈ ಬಾರಿ ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ‘ದಿಸ್ ಮೂಮೆಂಟ್’ ಹೆಸರಿನ ಆಲ್ಬಂಗೆ ಬೆಸ್ಟ್ ಗ್ಲೋಬಲ್ ಮ್ಯೂಸಿಕ್ ಆಲ್ಬಂ ವಿಭಾಗದಲ್ಲಿ ಪ್ರಶಸ್ತಿ ಬಂದಿದೆ.

- Advertisement -


ಸಂಗೀತ ಕ್ಷೇತ್ರದಲ್ಲಿ ಪ್ರತಿಷ್ಠಿತ ಎಂದೇ ಪರಿಗಣಿಸಲಾದ ಗ್ರ್ಯಾಮಿ ಪ್ರಶಸ್ತಿಗಳನ್ನು ಪ್ರದಾನ ಸಮಾರಂಭ ಲಾಸ್ ಏಂಜಲೀಸ್ನಲ್ಲಿ ನಡೆಯಿತು. ಭಾರತೀಯ ಸಂಗೀತ ಕಲಾವಿದರಾದ ಶಂಕರ್ ಮಹಾದೇವನ್ ಮತ್ತು ಝಾಕೀರ್ ಹುಸೈನ್ ಗೆ ಈ ಬಾರಿಯ ಗ್ರ್ಯಾಮಿ ಅವಾರ್ಡ್ ಒಲಿದು ಬಂತು. ಲಾಸ್ ಏಂಜಲೀಸ್ ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿಶ್ವದೆಲ್ಲೆಡೆಯ ಸಂಗೀತ ಕಲಾವಿದರ ಸಮ್ಮುಖದಲ್ಲಿ ಭಾರತದ ಸಂಗೀತ ದಿಗ್ಗಜರು ಪ್ರಶಸ್ತಿ ಪಡೆದುಕೊಂಡಿದ್ದಾರೆ.

Join Whatsapp