ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ಜನಪ್ರಿಯ ‘ಪಾಪ ಪಾಂಡು’ ಧಾರಾವಾಹಿಯ ಕಲಾವಿದ ಶಂಕರ್ ರಾವ್ ಇಂದು ನಿಧನರಾಗಿದ್ದಾರೆ.
- Advertisement -
ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 84 ವರ್ಷ ವಯಸ್ಸಾಗಿತ್ತು.
ಹವ್ಯಾಸಿ ರಂಗಭೂಮಿ ಕಲಾವಿದರಾಗಿದ್ದ ಅವರು ‘ಯಾರ ಸಾಕ್ಷಿ’ ಸಿನಿಮಾದಲ್ಲಿ ಮೊದಲ ಬಾರಿಗೆ ನಟಿಸಿದ್ದರು. ಬಳಿಕ ಹಲವಾರು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದರು.
- Advertisement -
ಇವರ ನಿಧನಕ್ಕೆ ಚಂದನವನ ಕಂಬನಿ ಮಿಡಿದಿದೆ.