Home ಟಾಪ್ ಸುದ್ದಿಗಳು ಎನ್’ಸಿಪಿ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ಶರದ್ ಪವಾರ್

ಎನ್’ಸಿಪಿ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ಶರದ್ ಪವಾರ್

ಮುಂಬೈ: ಎನ್’ಸಿಪಿ ರಾಷ್ಟ್ರೀಯ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶರದ್ ಪವಾರ್ ಘೋಷಿಸಿದ್ದಾರೆ.


ಪವಾರ್ ಅವರು ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ರಚಿಸಲು ಶಿವಸೇನಾ, ಕಾಂಗ್ರೆಸ್ ಮತ್ತು ಎನ್ ಸಿಪಿ ನಡುವೆ ಮೈತ್ರಿಯನ್ನು ಒಟ್ಟುಗೂಡಿಸುವಲ್ಲಿ ದೊಡ್ಡ ಪಾತ್ರ ಹೊಂದಿದ್ದರು.


ಉದ್ಧವ್ ಠಾಕ್ರೆ ಸರ್ಕಾರದಿಂದ ಬೇರ್ಪಟ್ಟ ನಂತರ ಏಕನಾಥ್ ಶಿಂಧೆ ಅವರು ಪಕ್ಷದ ತಂಡದೊಂದಿಗೆ ಬಿಜೆಪಿ ಸೇರಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಿದ್ದರು. ಇದಾದ ಬಳಿಕ, ಈಚೆಗೆ ಎನ್ ಸಿಪಿಯ ಅಜಿತ್ ಪವಾರ್ ಅವರು ತಮ್ಮ ಚಿಕ್ಕಪ್ಪ ಶರದ್ ಪವಾರ್ ಅವರನ್ನು ತೊರೆದು ಬಿಜೆಪಿಯೊಂದಿಗೆ ಕೈಜೋಡಿಸಿ ಮುಂದಿನ ಸಿಎಂ ಆಗುತ್ತಾರೆಯೇ ಎಂಬ ಊಹಾಪೋಹದ ಸುದ್ದಿ ಹರಿದಾಡುತ್ತಿದೆ. ಇದರ ಬೆನ್ನಲ್ಲೇ ಶರದ್ ಪವಾರ್ ಅವರು ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

Join Whatsapp
Exit mobile version