Home ಟಾಪ್ ಸುದ್ದಿಗಳು ಶರದ್ ಪವಾರ್‌‌ಗೆ ಝಡ್ ಪ್ಲಸ್ ಭದ್ರತೆ ಒದಗಿಸಿದ ಕೇಂದ್ರ ಸರ್ಕಾರ

ಶರದ್ ಪವಾರ್‌‌ಗೆ ಝಡ್ ಪ್ಲಸ್ ಭದ್ರತೆ ಒದಗಿಸಿದ ಕೇಂದ್ರ ಸರ್ಕಾರ

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ ಮುಖ್ಯಸ್ಥ ಶರದ್ ಪವಾರ್‌ ಅವರಿಗೆ ಅತ್ಯುನ್ನತ ವರ್ಗದ ಸಶಸ್ತ್ರ ವಿಐಪಿ ಭದ್ರತೆಯಾದ ಝಡ್ ಪ್ಲಸ್ ಭದ್ರತೆಯನ್ನು ಕೇಂದ್ರ ಸರ್ಕಾರ ಒದಗಿಸಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.

83 ವರ್ಷದ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಶರದ್ ಪವಾರ್ ಅವರ ಭದ್ರತೆಗಾಗಿ 55 ಶಸ್ತ್ರಸಜ್ಜಿತ ಸಿಆರ್‌ಪಿಎಫ್ ಸಿಬ್ಬಂದಿಯ ತಂಡವಲದ ಝಡ್ ಪ್ಲಸ್ ಭದ್ರತೆ ಒದಗಿಸುವಂತೆ ಕೇಂದ್ರ ಮೀಸಲು ಪೊಲೀಸ್ ಪಡೆಗೆಕೇಂದ್ರ ಗೃಹ ಸಚಿವಾಲಯವು ಸೂಚಿಸಿದೆ.

ಕೇಂದ್ರ ಗುಪ್ತಚರ ಸಂಸ್ಥೆಗಳು, ಶರದ್ ಪವಾರ್ ಅವರಿಗೆ ಕೆಲವು ಸಮಾಜ ಘಾತುಕ ಶಕ್ತಿಗಳಿಂದ ಅಪಾಯವಿದೆ ಎಂಬ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಅವರಿಗೆ ಝೆಡ್ ಪ್ಲಸ್ ಭದ್ರತೆಯನ್ನು ಒದಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಶರದ್ ಪವಾರ್ ಅವರಿಗೆ ಝಡ್ ಪ್ಲಸ್ ಭದ್ರತೆ ಒದಗಿಸಲು ಸಿಆರ್‌ಪಿಎಫ್ ತಂಡ ಈಗಾಗಲೇ ಮಹಾರಾಷ್ಟ್ರದಲ್ಲಿದೆ ಎಂದು ಅವರು ಹೇಳಿದ್ದಾರೆ.

Join Whatsapp
Exit mobile version