ಶರದ್ ಪವಾರ್ ಗೆ ಕೇಂದ್ರ ಸಚಿವರಿಂದ ಬೆದರಿಕೆ: ಸಂಜಯ್ ರಾವತ್ ಆರೋಪ
Prasthutha: June 24, 2022

ಮುಂಬೈ: ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ನಡುವೆಯೇ ಕೇಂದ್ರ ಸಚಿವ ಶರದ್ ಪವಾರ್ ಅವರಿಗೆ ಕೇಂದ್ರ ಸಚಿವ ಬೆದರಿಕೆ ಹಾಕುತ್ತಿದ್ದಾರೆ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಶುಕ್ರವಾರ ಆರೋಪಿಸಿದ್ದಾರೆ.
“ಕೇಂದ್ರ ಸಚಿವರೊಬ್ಬರು ಶರದ್ ಪವಾರ್ ಅವರಿಗೆ ಬೆದರಿಕೆ ಹಾಕುತ್ತಿದ್ದಾರೆ. ಇಂತಹ ಬೆದರಿಕೆಗಳಿಗೆ ಮೋದಿ ಜಿ ಮತ್ತು ಅಮಿತ್ ಶಾ ಅವರ ಬೆಂಬಲವಿದೆಯೇ ಎಂದು ರಾವತ್ ಪ್ರಶ್ನಿಸಿದ್ದಾರೆ.
ಇದು ಕಳವಳಕಾರಿ ವಿಷಯವಾಗಿದೆ ಮತ್ತು ಗೃಹ ಸಚಿವರು ಮತ್ತು ಪ್ರಧಾನಿ ಮೋದಿ ಈ ಬಗ್ಗೆ ಗಮನ ಹರಿಸಬೇಕು ಎಂದು ಶಿವಸೇನೆ ನಾಯಕ ಹೇಳಿದರು.
