ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಲಿರುವ ಶರದ್ ಪವಾರ್, ಉದ್ಧವ್ ಠಾಕ್ರೆ !

Prasthutha|

ಮುಂಬಯಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ನಡೆಯುತ್ತಿದ್ದು, ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಮತ್ತು ಶಿವಸೇನೆ ಮುಖ್ಯಸ್ಥ ಮತ್ತು ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಮಾಹಿತಿ ನೀಡಿದ್ದಾರೆ.

- Advertisement -


ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನವೆಂಬರ್ 7 ರಂದು ಮಹಾರಾಷ್ಟ್ರ ಪ್ರವೇಶಿಸಲಿದೆ. ಯಾತ್ರೆಗೆ ಸಹಭಾಗಿಯಾಗಲು ಯಶವಂತರಾವ್ ಚವಾಣ್ ಸಂಸ್ಥೆಗೆ ಭೇಟಿಯಾಗುವಂತೆ ಕಾಂಗ್ರೆಸ್ ನಾಯಕರು ಅ.17 ರಂದು ಉದ್ಧವ್ ಠಾಕ್ರೆ ಅವರನ್ನು ಆಹ್ವಾನಿಸಿದ್ದರು. ಇದೀಗ ಉದ್ಧವ್ ಠಾಕ್ರೆ ಅವರಲ್ಲದೆ, ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಮಾಹಿತಿ ನೀಡಿದ್ದಾರೆ

Join Whatsapp