ರಾಜೀನಾಮೆ ಹಿಂಪಡೆದ ಶರದ್ ಪವಾರ್

Prasthutha|

ನವದೆಹಲಿ: ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಶರದ್ ಪವಾರ್ ಅವರು ತಮ್ಮ ರಾಜೀನಾಮೆಯನ್ನು ಹಿಂಪಡೆದಿದ್ದಾರೆ.

- Advertisement -


ಶರದ್ ಪವಾರ್ ನೀಡಿದ ರಾಜೀನಾಮೆಯನ್ನು ತಿರಸ್ಕರಿಸಿದ ಪಕ್ಷದ ಸಮಿತಿ, ಪಕ್ಷದ ನಾಯಕತ್ವವನ್ನು ಮುಂದುವರಿಸಲು ಪವಾರ್ ಅವರನ್ನು ವಿನಂತಿಸುವ ಪ್ರಸ್ತಾಪವನ್ನು ಅಂಗೀಕರಿಸಿತ್ತು.


ಸಮಿತಿಯು ಸರ್ವಾನುಮತದಿಂದ ಶರದ್ ಪವಾರ್ ಅವರ ರಾಜೀನಾಮೆ ತಿರಸ್ಕರಿಸಿ ನಿರ್ಣಯ ಅಂಗೀಕರಿಸಿದೆ. ಇದು ಅವರ ರಾಜೀನಾಮೆ ನಿರ್ಧಾರವನ್ನು ಸರ್ವಾನುಮತದಿಂದ ತಿರಸ್ಕರಿಸುತ್ತದೆ ಮತ್ತು ಪಕ್ಷದ ಅಧ್ಯಕ್ಷರಾಗಿ ಮುಂದುವರಿಯುವಂತೆ ಒತ್ತಾಯಿಸುತ್ತದೆ ಎಂದು ಸಮಿತಿಯ ಸಭೆಯ ನಂತರ ಪಕ್ಷದ ಹಿರಿಯ ನಾಯಕ ಪ್ರಫುಲ್ ಪಟೇಲ್ ಹೇಳಿದ್ದಾರೆ.