ಉಡುಪಿ: ನಾಳೆಯೊಳಗೆ ಶರಣ್ ಪಂಪ್ ವೆಲ್ ಕ್ಷಮೆಯಾಚಿಸದಿದ್ದರೆ ಬಳ್ಳಾಲ್ ಬಾಗ್ ನಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಂಬ ಬಿರುವೆರ್ ಕುಡ್ಲ ಸಂಘಟನೆ ಎಚ್ಚರಿಕೆ ನೀಡಿದೆ.
ಉಡುಪಿ ಬಿರುವೆರ್ ಕುಡ್ಲ ಘಟಕ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಬಿರುವೆರ್ ಕುಡ್ಲ ಸಂಘಟನೆಯ ಹೆಸರನ್ನು ಕೆಡಿಸಲು ವ್ಯವಸ್ಥಿತವಾದ ಷಡ್ಯಂತ್ರ ನಡೆಯುತ್ತಿದೆ. ಸಂಘಟನೆ ಮಾಡುವ ಉತ್ತಮ ಸಮಾಜ ಸೇವೆಯನ್ನು ಕಂಡು ಸಹಿಸಲಾಗದ ಕೆಲವೊಂದು ವ್ಯಕ್ತಿಗಳು ನಮ್ಮ ಸಂಘಟನೆಗೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಶರಣ್ ಪಂಪ್ವೆಲ್ ಅವರು ಪೂರ್ಣ ಮಾಹಿತಿಯನ್ನು ತಿಳಿಯದೇ ಸಂಘಟನೆಯ ಮೇಲೆ ಆರೋಪ ಮಾಡಿದ್ದು, ಬೇಸರದ ವಿಚಾರ ಇದಕ್ಕಾಗಿ ಅವರು ಸಂಘಟನೆಯ ಕ್ಷಮೆಯಾಚಿಸಬೇಕು. ನಾಳೆಯ ಒಳಗೆ ಕ್ಷಮೆಯಾಚಿಸದಿದ್ದರೆ ಬಳ್ಳಾಲ್ಬಾಗ್ ನಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.