ಉಡುಪಿ: ಇಂದು ಸಂಜೆ ಎಂಜಿಎಂ ಕ್ರೀಡಾಂಗಣದಲ್ಲಿ ಶೌರ್ಯ ಜಾಗರಣಾ ಯಾತ್ರೆಯ ಅಂಗವಾಗಿ ಹಿಂದೂ ಸಮಾಜೋತ್ಸವದ ಸಮಾರಂಭದಲ್ಲಿ ಭಾಗವಹಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅವರಿಗೆ ಉಡುಪಿ ಜಿಲ್ಲಾ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ.
ಇತ್ತೀಚೆಗೆ ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ಪ್ರತಿಭಟನೆಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸರು ಸ್ವಯಂಪ್ರೇರಿತ ಪ್ರಕರಣವನ್ನು ಶರಣ್ ವಿರುದ್ಧ ದಾಖಲಿಸಿದ್ದರು.
ಶರಣ್ ಈ ಬಗ್ಗೆ ನ್ಯಾಯಾಲಯದಿಂದ ಶರತ್ತು ಬದ್ಧ ಜಾಮೀನು ಪಡೆದಿದ್ದು, ಜಾಮೀನು ನಿಯಮ ಉಲ್ಲಂಘನೆ ಆರೋಪದಡಿ ಹೆಜಮಾಡಿ ಗಡಿಯಲ್ಲಿ ಶರಣ್ರನ್ನು ತಡೆದ ಪೊಲೀಸರು ಹಿಂದಕ್ಕೆ ಕಳುಹಿಸಿದ್ದಾರೆ ಎಂದು ಉಡುಪಿ ಜಿಲ್ಲಾ ಎಸ್ಪಿ ಡಾ| ಅರುಣ್ ಕೆ. ಮಾಹಿತಿ ನೀಡಿದ್ದಾರೆ.