Home ಟಾಪ್ ಸುದ್ದಿಗಳು ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿಯ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ

ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿಯ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ

ನವದೆಹಲಿ: ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದಲ್ಲಿ ಬಂಧಿತರಾಗಿರುವ ಜೆಎನ್ ಯು ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಯ ವಿಚಾರಣೆಯ ತೀರ್ಪನ್ನು ದೆಹಲಿ ನ್ಯಾಯಾಲಯ ಕಾಯ್ದಿರಿಸಿದೆ. ನವೆಂಬರ್ 15ರಂದು ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.


2019 ರಲ್ಲಿ ಜಾಮಿಯಾ ನಗರ ಪ್ರದೇಶದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಮತ್ತು ಹಿಂಸೆಗೆ ಪ್ರಚೋದಿಸಿದ ಆರೋಪ ಅವರ ಮೇಲಿದೆ. ಡಿಸೆಂಬರ್ 15, 2019 ರಂದು, ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆಯಲ್ಲಿ ಜಾಮಿಯಾ ನಗರ ಪ್ರದೇಶದಲ್ಲಿ 3,000 ಕ್ಕೂ ಹೆಚ್ಚು ಜನರನ್ನು ಒಳಗೊಂಡ ಗುಂಪು ಪೊಲೀಸ್ ಸಿಬ್ಬಂದಿಯ ಮೇಲೆ ದಾಳಿ ಮಾಡಿ ಹಲವು ವಾಹನಗಳಿಗೆ ಬೆಂಕಿ ಹಚ್ಚಿತ್ತು. ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಹೊರಗೆ CAA-NRC ವಿರುದ್ಧ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಇಮಾಮ್ ಮಾಡಿದ್ದ ಭಾಷಣಗಳಿಂದ ಈ ಗುಂಪು ಪ್ರಚೋದಿತವಾಗಿತ್ತು ಎಂದು ಪ್ರಾಸಿಕ್ಯೂಷನ್ ಆರೋಪಿಸಿತ್ತು.

Join Whatsapp
Exit mobile version