ಬೆಂಗಳೂರು : ಭ್ರಷ್ಟಾಚಾರ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ಬಂಧನದಲ್ಲಿದ್ದ ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ಆಪ್ತೆ, ಎಐಎಡಿಎಂಕೆ ಮಾಜಿ ನಾಯಕಿ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಕೋವಿಡ್ ಸೋಂಕಿಗೆ ಒಳಗಾಗಿರುವ ಶಶಿಕಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಮೂಲಗಳು ತಿಳಿಸಿವೆ. ಪರಪ್ಪನ ಅಗ್ರಹಾರ ಜೈಲಿನ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, 63 ವರ್ಷದ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಎಲ್ಲಾ ಪ್ರಕ್ರಿಯೆಗಳನ್ನೂ ಆಸ್ಪತ್ರೆಯಲ್ಲಿಯೇ ಪೂರ್ಣಗೊಳಿಸಲಾಗುವುದು. ಆದರೆ, ಆಸ್ಪತ್ರೆಯಿಂದ ಶಶಿಕಲಾ ಯಾವಾಗ ಬಿಡುಗಡೆಗೊಳ್ಳಲಿದ್ದಾರೆ ಎಂಬ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ.