Home ಟಾಪ್ ಸುದ್ದಿಗಳು ಪ್ರಧಾನಿಯವರೇ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾದರೆ ನಾನೂ ಸ್ಪರ್ಧಿಸಬಹುದು: ಶತ್ರುಘ್ನ ಸಿನ್ಹಾ

ಪ್ರಧಾನಿಯವರೇ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾದರೆ ನಾನೂ ಸ್ಪರ್ಧಿಸಬಹುದು: ಶತ್ರುಘ್ನ ಸಿನ್ಹಾ

ಹೊಸದಿಲ್ಲಿ: ಪ್ರಧಾನಿಯವರೇ  ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾದರೆ, ನನಗೂ ಅದೇ ನಿಯಮ  ಅನ್ವಯಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಿಂದ ಸ್ಪರ್ಧಿಸಬೇಕಾದರೆ ಬಿಜೆಪಿ ಏನು ಮಾಡುತ್ತಿತ್ತು ಎಂದು ಎಂದು ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಶತ್ರುಘ್ನ ಸಿನ್ಹಾ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಿಂದ ಸ್ಪರ್ಧಿಸಬಹುದಾದರೆ, ನಾನು ಬಂಗಾಳದ ಅಸನ್ಸೋಲ್ನಿಂಧದ ಸ್ಪರ್ಧಿಸಬಹುದು ಎಂದು ಹೇಳಿದ್ದಾರೆ.

ಶತ್ರುಘ್ನ ಸಿನ್ಹಾ ಅವರು ಲೋಕಸಭಾ ಉಪಚುನಾವಣೆಗೆ ನಾಮಪತ್ರ ಸಲ್ಲಿಸುವುದರ ಕುರಿತು ಪಶ್ಚಿಮ ಬಂಗಾಳದ ಬಿಜೆಪಿ ನಾಯಕರಾದ ಸುಕಾಂತ ಮಜುಂದಾರ್ ಮತ್ತು ಅಗ್ನಿಮಿತ್ರ ಪಾಲ್ ಮಾತನಾಡಿ ರಾಜ್ಯಕ್ಕೆ ಶತ್ರುಘ್ನ ಸಿನ್ಹಾ ಅವರು ಹೊರಗಿನವರು ಎಂದು ಲೇವಡಿ ಮಾಡಿದ್ದರು.

ಶತ್ರುಘ್ನ ಸಿನ್ಹಾ ಅವರು ಬಿಜೆಪಿಯ ಅಗ್ನಿಮಿತ್ರ ಪಾಲ್ ವಿರುದ್ಧ ಕಣಕ್ಕಿಳಿದಿದ್ದು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಅಸನ್ಸೋಲ್ ಲೋಕಸಭಾ ಕ್ಷೇತ್ರ ಮತ್ತು ಬಳ್ಳಿಗುಂಜೆ ವಿಧಾನಸಭಾ ಕ್ಷೇತ್ರದಲ್ಲಿ ಎಪ್ರಿಲ್ 12 ರಂದು ಉಪಚುನಾವಣೆ ನಡೆಯಲಿದ್ದು, ಎಪ್ರಿಲ್ 16 ರಂದು ಮತ ಎಣಿಕೆ ನಡೆಯಲಿದೆ.

Join Whatsapp
Exit mobile version