Home ಟಾಪ್ ಸುದ್ದಿಗಳು ನೇಪಾಳ: 19 ಮಂದಿ ಪ್ರಯಾಣಿಕರಿದ್ದ ಶೌರ್ಯ ವಿಮಾನ ಪತನ

ನೇಪಾಳ: 19 ಮಂದಿ ಪ್ರಯಾಣಿಕರಿದ್ದ ಶೌರ್ಯ ವಿಮಾನ ಪತನ

ನೇಪಾಳ: ಕಠ್ಮಂಡುವಿನಲ್ಲಿ ಟೇಕ್ ಆಪ್ ಆಗುವ ವೇಳೆ 19 ಪ್ರಯಾಣಿಕರಿದ್ದ ಶೌರ್ಯ ವಿಮಾನ ಪತನಗೊಂಡಿದೆ.


ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ. ಇಲ್ಲಿಯವರೆಗಿನ ಮಾಹಿತಿ ಪ್ರಕಾರ, ಸೂರ್ಯ ಏರ್ ಲೈನ್ಸ್ ವಿಮಾನವು ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪೊಖರಾಗೆ ಹಾರುತ್ತಿತ್ತು.


ವಿಮಾನದಲ್ಲಿ ಸಾಮಾನ್ಯ ಪ್ರಯಾಣಿಕರು ಇರಲಿಲ್ಲ, ಆದರೆ ತಾಂತ್ರಿಕ ತಂಡದ 19 ಸದಸ್ಯರು ವಿಮಾನದಲ್ಲಿದ್ದರು. ಸಾವು ನೋವುಗಳ ಬಗ್ಗೆ ಇನ್ನೂ ಮಾಹಿತಿ ಬಂದಿಲ್ಲ. ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ. ಪತನದ ನಂತರ ವಿಮಾನದಿಂದ ಹೊಗೆ ಬರುತ್ತಿರುವುದು ಕಂಡುಬಂದಿದೆ ಎಂದು ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮಾಹಿತಿ ಅಧಿಕಾರಿ ಜ್ಞಾನೇಂದ್ರ ಭುಲ್ ಹೇಳಿರುವುದಾಗಿ ಕಠ್ಮಂಡು ಪೋಸ್ಟ್ ವರದಿ ಮಾಡಿದೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.

Join Whatsapp
Exit mobile version