Home ಟಾಪ್ ಸುದ್ದಿಗಳು ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆ

ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆ

ಢಾಕಾ: ಬಾಂಗ್ಲಾದೇಶದಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ 300 ಮಂದಿ ಹತರಾಗಿದ್ದಾರೆ‌. ಮಾಹಿತಿಯ ಪ್ರಕಾರ ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ.

ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಶೇಖ್‌ ಹಸೀನಾ ಅವರ ಕಚೇರಿಗೆ ನುಗ್ಗಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಕಾರರು ಮನೆಗೆ ನುಗ್ಗುವ ಮೊದಲೇ ಶೇಖ್‌ ಹಸೀನಾ ರಾಜೀನಾಮೆ ನೀಡಿ ವಿದೇಶಕ್ಕೆ ತೆರಳಿದ್ದಾರೆ ಎಂದು ವರದಿಯಾಗಿದೆ. ಕೆಲ ಮಾಧ್ಯಮಗಳು ವಿಶೇಷ ವಿಮಾನದ ಮೂಲಕ ಭಾರತಕ್ಕೆ ಬಂದು ಆಶ್ರಯ ಪಡೆದಿದ್ದಾರೆ ಎಂದು ವರದಿಯಾಗಿದೆ.

Join Whatsapp
Exit mobile version