ನಟ ಶೇಖರ್ ಸುಮನ್, ರಾಧಿಕಾ ಖೇರಾ ಬಿಜೆಪಿಗೆ ಸೇರ್ಪಡೆ

Prasthutha|

ನವದೆಹಲಿ: ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು ನಡೆಯುತ್ತಿದ್ದು, ಈ ನಡುವೆ ಬಾಲಿವುಡ್ ನಟ ಶೇಖರ್ ಸುಮನ್ ಹಾಗೂ ಕಾಂಗ್ರೆಸ್ನ ಮಾಜಿ ನಾಯಕಿ ರಾಧಿಕಾ ಖೇರಾ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

- Advertisement -


ಸುಮನ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೋ ಇಲ್ಲವೋ ಸ್ಪಷ್ಟವಾಗಿಲ್ಲ. ಶೇಖರ್ ಸುಮನ್ ಅವರು ಇತ್ತೀಚೆಗೆ ಬಿಡುಗಡೆಯಾದ ಹಿರಾಮಂಡಿ ವೆಬ್-ಸರಣಿಯಲ್ಲಿ ಕಾಣಿಸಿಕೊಂಡಿದ್ದಾರೆ. ಕಾಂಗ್ರೆಸ್ ವಿರುದ್ಧ ಆಘಾತಕಾರಿ ಆರೋಪಗಳನ್ನು ಮಾಡಿದ ಒಂದು ದಿನದ ನಂತರ ರಾಧಿಕಾ ಖೇರಾ ಬಿಜೆಪಿಗೆ ಸೇರಿದ್ದಾರೆ. ರಾಮ ಮಂದಿರಕ್ಕೆ ಭೇಟಿ ನೀಡಿ ಚಿತ್ರಗಳನ್ನು ಶೇರ್ ಮಾಡಿದ್ದಕ್ಕಾಗಿ ಕಾಂಗ್ರೆಸ್ ನಿಂದ ಛೀಮಾರಿ ಹಾಕಿಸಿಕೊಂಡಿದ್ದೇನೆ ಎಂದು ಅವರು ಹೇಳಿದ್ದಾರೆ.

Join Whatsapp