Home ಟಾಪ್ ಸುದ್ದಿಗಳು ಬೆನ್ನಿಗೆ ಚೂರಿ ಹಾಕಿದ ಶೆಟ್ಟರ್, ಸವದಿಯನ್ನು ಸೋಲಿಸುವ ಜವಾಬ್ದಾರಿ ನನ್ನದು: ಯಡಿಯೂರಪ್ಪ

ಬೆನ್ನಿಗೆ ಚೂರಿ ಹಾಕಿದ ಶೆಟ್ಟರ್, ಸವದಿಯನ್ನು ಸೋಲಿಸುವ ಜವಾಬ್ದಾರಿ ನನ್ನದು: ಯಡಿಯೂರಪ್ಪ

ಚಿಕ್ಕೋಡಿ: ಜಗದೀಶ್ ಶೆಟ್ಟರ್ ನಮ್ಮ ಬೆನ್ನಿಗೆ ಚೂರಿ ಹಾಕಿದ್ದಾರೆ. ಲಕ್ಷ್ಮಣ ಸವದಿ ಅವರನ್ನು ಸೋಲಿಸುವ ಹೊಣೆ ನನ್ನದು ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.


ನಗರದ ಶಿವಯೋಗಿ ದೇವಸ್ಥಾನದ ಮೈದಾನದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಇನ್ನೂ ವಿಧಾನ ಪರಿಷತ್ ಅವಧಿ 5 ವರ್ಷ 2 ತಿಂಗಳು ಇದ್ದರೂ ಲಕ್ಷ್ಮಣ ಸವದಿ ಬೆನ್ನಿಗೆ ಚೂರಿ ಹಾಕಿ ಹೋಗಿದ್ದಾರೆ. ಎಲ್ಲಾ ಅಧಿಕಾರ ಅನುಭವಿಸಿಯೂ ಶೆಟ್ಟರ್ ಬಿಜೆಪಿ ತೊರೆದಿದ್ದಾರೆ. ಇಲ್ಲಿ ಶೆಟ್ಟರ್, ಸವದಿ ಅವರನ್ನು ಸೋಲಿಸುವ ಜವಾಬ್ದಾರಿ ನನ್ನದು ಎಂದರು.


10 ಸಾವಿರ ಜನ ಉರಿ ಬಿಸಿಲಿನಲ್ಲಿ ಸೇರುತ್ತಾರೆ ಎಂದು ನನಗೆ ನಂಬಿಕೆ ಇರಲಿಲ್ಲ. ಇಷ್ಟೊಂದು ಜನ ಸೇರಿದ್ದಾರೆ ಎಂದರೆ ಈ ಬಾರಿ ಚುನಾವಣೆಯಲ್ಲಿ ಸವದಿ ಸೋಲುವುದು ಖಚಿತ. ಸೂರ್ಯ-ಚಂದ್ರ ಇರುವುದು ಎಷ್ಟು ಸತ್ಯವೋ, ರಾಜ್ಯದಲ್ಲಿ ಬಿಜೆಪಿ 130ಕ್ಕೂ ಹೆಚ್ಚು ಸೀಟು ಪಡೆದು ಸರ್ಕಾರ ರಚಿಸುವುದು ಅಷ್ಟೇ ಸತ್ಯ ಎಂದರು.

Join Whatsapp
Exit mobile version