ಶಿಬಾಜೆ ದಲಿತ ಯುವಕ‌ ಶ್ರೀಧರ ಹತ್ಯೆ: ಎಸ್‌ಡಿಪಿಐ ಪಕ್ಷದಿಂದ ಖಂಡನೆ

Prasthutha|

ಬೆಳ್ತಂಗಡಿ(ಡಿ-18): ತಾಲೂಕಿನ ಶಿಬಾಜೆ ಗ್ರಾಮದಲ್ಲಿ ದಲಿತ ಸಮುದಾಯದ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಖಂಡನೆ ವ್ಯಕ್ತಪಡಿಸಿದ್ದು ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದ್ದಾರೆ.

- Advertisement -

ಶಿಬಾಜೆಯಲ್ಲಿ ನಡೆದಿರುವ ದಲಿತ ಯುವಕ‌ ಶ್ರೀಧರ ಅವರ ಹತ್ಯೆಯನ್ನು ಎಸ್‌ಡಿಪಿಐ ಖಂಡಿಸುತ್ತದೆ. ಶಿಬಾಜೆ ಗುತ್ತು ಮನೆ ಎಂಬಲ್ಲಿ ತೋಟದ ಮೇಲ್ವಿಚಾರಕನಾಗಿ ಕೆಲಸ ನಿರ್ವಹಿಸುತ್ತಿದ್ದ ಶ್ರೀಧರ ಅವರಿಗೆ ಶನಿವಾರ ಆರೋಪಿಗಳು ಮರಣಾಂತಿಕ ಹಲ್ಲೆ ನಡೆಸಿದ್ದು ಭಾನುವಾರ ಅವರ ಮೃತದೇಹ ನಗ್ನ ಸ್ಥಿತಿಯಲ್ಲಿ ತೋಟದಲ್ಲಿ ಪತ್ತೆಯಾಗಿದೆ. ಪೊಲೀಸರು ರಾಜಕೀಯ ಪ್ರಭಾವಕ್ಕೆ‌‌ ಮಣಿಯದೆ ಕೊಲೆ ಆರೋಪಿಗಳನ್ನು ತಕ್ಷಣ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಮೃತ ಯುವಕನ ಕುಟುಂಬಕ್ಕೆ ಸರ್ಕಾರದಿಂದ ಶೀಘ್ರ ಪರಿಹಾರ ನೀಡಬೇಕು ಎಂದು ಅಕ್ಬರ್ ಬೆಳ್ತಂಗಡಿ ಒತ್ತಾಯಿಸಿದ್ದಾರೆ.

Join Whatsapp