Home ಟಾಪ್ ಸುದ್ದಿಗಳು ಶಿಗ್ಗಾವಿ | ಕಾಂಗ್ರೆಸ್ ವಿರುದ್ಧ ಖಾದ್ರಿ ಬಂಡಾಯ: ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ಶಿಗ್ಗಾವಿ | ಕಾಂಗ್ರೆಸ್ ವಿರುದ್ಧ ಖಾದ್ರಿ ಬಂಡಾಯ: ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

►ಕೊನೆ ಕ್ಷಣದಲ್ಲಿ ಬೈಕ್‌ ನಲ್ಲಿ ಬಂದು ನಾಮಪತ್ರ ಸಲ್ಲಿಕೆ!

ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ಬಂಡಾಯ ಎದ್ದಿರುವ ಮಾಜಿ ಶಾಸಕ ಸೈಯದ್ ಅಜ್ಜಂಪೀರ್ ಖಾದ್ರಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.


ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ಖಾದ್ರಿ, ತಮಗೆ ಟಿಕೆಟ್ ಸಿಗುತ್ತದೆಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ, ಅಂತಿಮವಾಗಿ ಯಾಸೀರ್ ಅಹ್ಮದ್ ಖಾನ್ ಪಠಾಣ ಅವರಿಗೆ ಟಿಕೆಟ್ ಸಿಕ್ಕಿದೆ.


ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಖಾದ್ರಿ, ಕ್ಷೇತ್ರದಲ್ಲಿರುವ ತಮ್ಮ ಬೆಂಬಲಿಗರ ಜೊತೆ ಶುಕ್ರವಾರ ಸಭೆ ನಡೆಸಿದರು.


‘ಕಾಂಗ್ರೆಸ್ ಪಕ್ಷ ಅನ್ಯಾಯ ಮಾಡಿದೆ. ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ. ನಾಮಪತ್ರ ಸಲ್ಲಿಸದಿದ್ದರೆ ನಿಮ್ಮ ವಿರುದ್ಧವೇ ಪ್ರತಿಭಟನೆ ಮಾಡಬೇಕಾಗುತ್ತದೆ’ ಎಂದು ಬೆಂಬಲಿಗರು ಹೇಳಿದ್ದರು.
ಇದಕ್ಕೆ ಒಪ್ಪಿದ ಖಾದ್ರಿ, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ಒಪ್ಪಿಕೊಂಡಿದ್ದಾರೆ.


ಕೊನೇ ಕ್ಷಣದಲ್ಲಿ ಶಿಗ್ಗಾವಿ ತಹಶೀಲ್ದಾರ್ ಕಚೇರಿಗೆ ಓಡೋಡಿ ಬಂದ ಅಜ್ಜಂಪೀರ್ ಖಾದ್ರಿ ಅವರು, ಬೈಕ್ ಮೂಲಕವೇ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಖಾದ್ರಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಮಾತ್ರವಲ್ಲ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸಿದ್ದಾರೆ.

Join Whatsapp
Exit mobile version