Home ಟಾಪ್ ಸುದ್ದಿಗಳು ಕ್ರಿಕೆಟ್’ಗೆ ನಿವೃತ್ತಿ ಘೋಷಿಸಿದ ಶಿಖರ್ ಧವನ್

ಕ್ರಿಕೆಟ್’ಗೆ ನಿವೃತ್ತಿ ಘೋಷಿಸಿದ ಶಿಖರ್ ಧವನ್

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಬ್ಯಾಟರ್ ಶಿಖರ್ ಧವನ್ ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ.


‘ನಾನು ನನ್ನ ಕ್ರಿಕೆಟ್ ಅಧ್ಯಾಯವನ್ನು ಕೊನೆಗೊಳಿಸುತ್ತಿದ್ದೇನೆ. ಅಸಂಖ್ಯಾತ ನೆನಪುಗಳು ಮತ್ತು ಕೃತಜ್ಞತೆಗಳನ್ನು ನಾನು ಹೊತ್ತುಕೊಂಡು ಹೋಗುತ್ತಿದ್ದೇನೆ. ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು. ಜೈ ಹಿಂದ್!’ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

‘ಜೀವನದಲ್ಲಿ ಮುಂದುವರಿಯಲು ಪುಟವನ್ನು ತಿರುಗಿಸುವುದು ಮುಖ್ಯ. ಅದಕ್ಕಾಗಿಯೇ ನಾನು ಅಂತರರಾಷ್ಟ್ರೀಯ ಮತ್ತು ದೇಶೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ನೆಮ್ಮದಿಯಿಂದ ನಿರ್ಗಮಿಸುತ್ತಿದ್ದೇನೆ’ ಎಂದು ಹೇಳಿದ್ದಾರೆ.

Join Whatsapp
Exit mobile version