Home ಟಾಪ್ ಸುದ್ದಿಗಳು ಶಿವಮೊಗ್ಗ: ವಿಚಿತ್ರ ಕರುವಿಗೆ ಜನ್ಮ ನೀಡಿದ ಎಮ್ಮೆ

ಶಿವಮೊಗ್ಗ: ವಿಚಿತ್ರ ಕರುವಿಗೆ ಜನ್ಮ ನೀಡಿದ ಎಮ್ಮೆ

ಸೊರಬ: ಎಮ್ಮೆಯೊಂದು ವಿಚಿತ್ರ ಕರುವಿಗೆ ಜನ್ಮ ನೀಡಿದ ಘಟನೆ ಪುರಸಭೆ ವ್ಯಾಪ್ತಿಯ ಹಳೇಸೊರಬ ಸಮೀಪದ ಗೌರಿಕೆರೆ ಮಠದಲ್ಲಿ ನಡೆದಿದೆ.


ಮಹೇಂದ್ರಸ್ವಾಮಿ ಎಂಬವರಿಗೆ ಸೇರಿದ ಎಮ್ಮೆ ಶನಿವಾರ ಮುಂಜಾನೆ ವಿಚಿತ್ರ ಗಂಡು ಕರುವಿಗೆ ಜನ್ಮ ನೀಡಿದ್ದು, ಕಣ್ಣುಗಳು ಮತ್ತು ಗೊರಸು ಇಲ್ಲದೇ ಬಾಯಿಯ ಮೂಲಕವೇ ಉಸಿರಾಡುತ್ತಿದೆ. ದೇಹ ಸಾಮಾನ್ಯ ಸ್ಥಿತಿಯಲ್ಲಿದ್ದರೂ ಏಳಲು ಸಾಧ್ಯವಾಗದೇ ಒದ್ದಾಡುತ್ತಿದೆ.


ಈ ಮೊದಲು ಇದೇ ಎಮ್ಮೆಗೆ ಜನಿಸಿದ್ದಐದು ಕರುಗಳೂ ಆರೋಗ್ಯವಾಗಿದ್ದವು. ವಿಚಿತ್ರವಾಗಿ ಜನಿಸಿರುವ ಆರನೇ ಕರು ಹೆಚ್ಚು ಕಾಲ ಬದುಕುವುದಿಲ್ಲ ಎಂದು ಪಶು ವೈದ್ಯರು ತಿಳಿಸಿದ್ದಾರೆ.

Join Whatsapp
Exit mobile version