ಶಿವಮೊಗ್ಗ: ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಘಟನೆ ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಡೆದಿದೆ.
ಭದ್ರಾವತಿ ತಾಲೂಕಿನ ತಡಸಾ ಗ್ರಾಮದ ಅಲ್ಮಾಹ್ ಬಾನುಗೆ ಎರಡು ಗಂಡು ಮತ್ತು ಎರಡು ಹೆಣ್ಣು ಮಕ್ಕಳಾಗಿದ್ದು, ಮಕ್ಕಳು ಹಾಗೂ ತಾಯಿ ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.
ನಮ್ಮ ಆಸ್ಪತ್ರೆಯಲ್ಲಿ ಪ್ರಪ್ರಥಮ ಬಾರಿಗೆ ಈ ರೀತಿಯಾಗಿ 4 ಮಕ್ಕಳಿಗೆ ಜನ್ಮ ನೀಡಿರುವುದು ಬಹಳ ಸಂತೋಷದ ವಿಷಯ. ಎಲ್ಲಾ ಶಿಶುಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಆ ಶಿಶುಗಳಿಗೆ ಅತೀ ಕಡಿಮೆ ದರದಲ್ಲಿ ಚಿಕಿತ್ಸೆ ಒದಗಿಸಿಕೊಡುತ್ತೇವೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಧನಂಜಯ ಸರ್ಜಿ ಹೇಳಿದ್ದಾರೆ.