ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 11 ರಿಂದ ವಿಮಾನ ಹಾರಾಟ ಆರಂಭ

Prasthutha|

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆಗಸ್ಟ್ 11 ರಂದು ವಿಮಾನ ಹಾರಾಟ ಆರಂಭವಾಗಲಿದ್ದು, ಮೊದಲ ವಿಮಾನ ಶಿವಮೊಗ್ಗ ಮತ್ತು ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.

- Advertisement -


ಕಳೆದ ವಾರ ಇಂಡಿಗೋ ಏರ್ ಲೈನ್ಸ್ ಅಧಿಕಾರಿಗಳು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಬಸ್ ಸೇವೆಗಳು ಸೇರಿದಂತೆ ವಿವಿಧ ಸೌಲಭ್ಯಗಳನ್ನು ಪರಿಶೀಲಿಸಿದ್ದಾರೆ ಎಂದು ತಿಳಿಸಿದರು.


ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ಈ ವಿಮಾನ ನಿಲ್ದಾಣ ಉದ್ಘಾಟಿಸಿದದ್ದು, ನಮಗೆ ಐತಿಹಾಸಿಕ ಕ್ಷಣವಾಗಿತ್ತು ಎಂದು ಹೇಳಿದರು.