Home ಟಾಪ್ ಸುದ್ದಿಗಳು ಶಿವಮೊಗ್ಗ ವಿಮಾನ ನಿಲ್ದಾಣ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ: ಮುಖ್ಯಮಂತ್ರಿ ಬೊಮ್ಮಾಯಿ

ಶಿವಮೊಗ್ಗ ವಿಮಾನ ನಿಲ್ದಾಣ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ: ಮುಖ್ಯಮಂತ್ರಿ ಬೊಮ್ಮಾಯಿ

ಶಿವಮೊಗ್ಗ: ಇನ್ನೆರಡು ವರ್ಷಗಳಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.


ಅವರು ಇಂದು ಶಿವಮೊಗ್ಗ ನಿಲ್ದಾಣದ ಉದ್ಗಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಪಾಲ್ಗೊಂಡು ಮಾತನಾಡಿದರು.
ಮಲೆನಾಡಿನ ಹೆಬ್ಬಾಗಿಲಾಗಿರುವ ಶಿವಮೊಗ್ಗದ ವಾಣಿಜ್ಯೋದ್ಯಮ, ವ್ಯಾಪಾರ, ವಹಿವಾಟು, ಕೃಷಿ, ಕೈಗಾರಿಕೆ, ಔದ್ಯೋಗೀಕರಣ ಇವೆಲ್ಲಕ್ಕೂ ಈ ವಿಮಾನ ನಿಲ್ದಾಣ ಹೆಬ್ಬಾಗಿಲಾಗಲಿದೆ. ಇಡೀ ಭಾರತದ ಮೂಲೆ ಮೂಲೆಗೆ ಈ ವಿಮಾನ ನಿಲ್ದಾಣ ಸಂಪರ್ಕ ಕಲ್ಪಿಸಲಿದೆ ಎಂದರು.


ಭಾರತ ದೇಶ ಆರ್ಥಿಕವಾಗಿ ಸಬಲವಾಗಿದ್ದು, ಜಿ 20 ಅಧ್ಯಕ್ಷ ಸ್ಥಾನ ಭಾರತಕ್ಕೆ ಬಂದಿದೆ. ಅದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾರಣೀಭೂತರು. ಈ 20 ಇಡೀ ವಿಶ್ವದ ಆರ್ಥಿಕ, ಸಾಮಾಜಿಕ ಸೇರಿದಂತೆ ಎಲ್ಲಾ ವಲಯಗಳಲ್ಲಿ ನಿರ್ಣಯ ಕೈಗೊಳ್ಳುವ ಜಿ 20 ಅಧ್ಯಕ್ಷ ಸ್ಥಾನ ಭಾರತದ ಪ್ರಧಾನಿಗಳಿಂದ ಲಭಿಸಿರುವುದು ಹೆಮ್ಮೆಯ ವಿಚಾರ. ಕರ್ನಾಟಕ ಭಾರತದ ನಿರ್ಮಾಣದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿದೆ. ಆರ್ಥಿಕವಾಗಿ ಅತಿ ಹೆಚ್ಚು ವಿದೇಶಿ ಬಂಡವಾಳ ರಾಜ್ಯಕ್ಕೆ ಬರುತ್ತದೆ. ನಾವೀನ್ಯತೆ, ತಂತ್ರಜ್ಞಾನದಲ್ಲಿ ನಂಬರ್ ಒನ್ ಸ್ಥಾನದಲ್ಲಿದ್ದು, ಸಮಾಜಿಕವಾಗಿಯೂ ನಂಬರ್ ಒನ್ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ ಶಿವಮೊಗ್ಗ ವಿಮಾನನಿಲ್ದಾಣ ಉದ್ಘಾಟನೆಗೊಂಡಿದೆ. ಬಿಜಾಪುರ ವಿಮಾನನಿಲ್ದಾಣ ಈಗಾಗಲೇ ಸಿದ್ದವಿದ್ದು, ಹಾಸನದಲ್ಲಿ ಪ್ರಗತಿಯಲ್ಲಿದೆ. ಕಾರವಾರದಲ್ಲಿ ಕಾಮಗಾರಿ ಪ್ರಾರಂಭವಾಗುತ್ತಿದ್ದು, ರಾಯಚೂರು, ಕೊಪ್ಪಳ ಮತ್ತು ದಾವಣಗೆರೆಯಲ್ಲಿ ಈ ವರ್ಷ ಕಾಮಗಾರಿಗಳು ಪ್ರಾರಂಭವಾಗಲಿದೆ. ವಿಮಾನನಿಲ್ದಾಣದ ಜಾಲ ಹಾಗೂ ಪ್ರಧಾನಿಗಳ ಆಶಯದಂತೆ ಸಾಗರಮಾಲಾ ಯೋಜನೆಯಡಿ ಏಳು ಬಂದರುಗಳ ಅಭಿವೃದ್ಧಿಯನ್ನು ಕೈಗೊಳ್ಳಲಾಗಿದೆ. ಕಳೆದ 5 ವರ್ಷಗಳಲ್ಲಿ ಆರು ಸಾವಿರ ಕಿಮೀ ರಾಷ್ಟ್ರೀಯ ಹೆದ್ದಾರಿ ಮಂಜೂರಾತಿಯಾಗಿದೆ. ಈ ಕಾರ್ಯಕ್ಕಾಗಿ 64 ಸಾವಿರ ಕೋಟಿ ಮಂಜೂರಾಗಿದ್ದು, ಈ ಪೈಕಿ 34 ಕೋಟಿ ರೂ.ಗಳು ಕರ್ನಾಟಕಕ್ಕೆ ಪ್ರಧಾನಿಗಳು ಬಿಡುಗಡೆ ಮಾಡಿದ್ದಾರೆ ಎಂದರು.


ಜನಪರ ಯೋಜನೆ
ಮಾರ್ಚ್ 11 ಕ್ಕೆ ಬೆಂಗಳೂರು – ಮೈಸೂರು ಹೆದ್ದಾರಿ ಉದ್ಘಾಟನೆಗೊಳ್ಳುತ್ತಿದ್ದು, ಧಾರವಾಡದಲ್ಲಿ ಐಐಟಿ ಉದ್ಘಾಟನೆಯಾಗುತ್ತಿದೆ. ಇವೆಲ್ಲವೂ ಡಬಲ್ ಇಂಜಿನ್ ಸರ್ಕಾರದಿಂದ ಆಗುತ್ತಿರುವುದು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಮೇಲೆ ಮಾರಾಣಾಂತಿಕ ಹಲ್ಲೆಯಾದರೂ, ಪುನ: ಹುಟ್ಟಿ ಬಂದು ಹೋರಾಟ ಮಾಡಿದರು. ಜನಪರ ಯೋಜನೆಗಳನ್ನು ರಾಜ್ಯಕ್ಕೆ ನೀಡಿದರು ಎಂದು ತಿಳಿಸಿದರು.

Join Whatsapp
Exit mobile version