ಶಿವಮೊಗ್ಗ | ಗಲಭೆ ಪೀಡಿತ ಪ್ರದೇಶಕ್ಕೆ ಬಿಜೆಪಿ ಸತ್ಯಶೋಧನಾ ತಂಡ ಭೇಟಿ: ನಳಿನ್ ಕುಮಾರ್

Prasthutha|

ಬೆಂಗಳೂರು: ಶಿವಮೊಗ್ಗ ಗಲಭೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಲು ಬಿಜೆಪಿಯು ಪಕ್ಷದ ಹಿರಿಯ ಮುಖಂಡರನ್ನು ಒಳಗೊಂಡ ಸತ್ಯಶೋಧನಾ ಸಮಿತಿಯನ್ನು ರಚಿಸಿದೆ. ಗುರುವಾರ ಶಿವಮೊಗ್ಗದ ಹಿಂಸಾಚಾರ ಪೀಡಿತ ಪ್ರದೇಶಕ್ಕೆ ತಂಡ ಭೇಟಿ ನೀಡಲಿದೆ.

- Advertisement -


ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದ ಸತ್ಯಶೋಧನಾ ತಂಡದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ ಕೆ.ಎಸ್.ಈಶ್ವರಪ್ಪ, ಸಿ.ಎನ್.ಅಶ್ವಥ್ ನಾರಾಯಣ್, ಮಾಜಿ ಸಚಿವ ಆರಗ ಜನೇಂದ್ರ, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಎಂ.ಎಲ್.ಸಿ ಎನ್. ರವಿಕುಮಾರ್, ಶಾಸಕ ಚನ್ನಬಸಪ್ಪ, ಎಂಎಲ್ಸಿಗಳಾದ ಎಸ್.ರುದ್ರೇಗೌಡ, ಡಿ ಎಸ್ ಅರುಣ್ ಮತ್ತು ಭಾರತಿ ಶೆಟ್ಟಿ ತಂಡದಲ್ಲಿದ್ದಾರೆ.

Join Whatsapp