Home ಟಾಪ್ ಸುದ್ದಿಗಳು ಶಿವಮೊಗ್ಗ: ಚೌಡೇಶ್ವರಿ ದೇವಸ್ಥಾನದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ಭಕ್ತರಿಂದ ಅಮವಾಸ್ಯೆ ಪೂಜೆ!

ಶಿವಮೊಗ್ಗ: ಚೌಡೇಶ್ವರಿ ದೇವಸ್ಥಾನದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ಭಕ್ತರಿಂದ ಅಮವಾಸ್ಯೆ ಪೂಜೆ!

ಶಿವಮೊಗ್ಗ: ಜಿಲ್ಲೆಯ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಅಮವಾಸ್ಯೆ ಹಿನ್ನಲೆಯಲ್ಲಿ ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು, ಕೊರೋನಾ ಸೋಂಕು ಹರಡುತ್ತಿರುವ ಈ ವೇಳೆ ಭಕ್ತರು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಕೋವಿಡ್ ನಿಯಮ ಉಲ್ಲಂಘನೆ ಮಾಡಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.

ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ರಾಜ್ಯದ ಬಹುತೇಕ ದೇವಾಲಯಗಳಲ್ಲಿ ಅಮವಾಸ್ಯೆಯ ಪೂಜೆಗೆ ಭಕ್ತಾದಿಗಳು ಹರಿದು ಬರುತ್ತಿರುವುದರಿಂದ ದೇವಸ್ಥಾನಗಳಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದ್ದರೂ ಶ್ರೀ ಸಿಗಂದೂರು ಚೌಡೇಶ್ವರಿ ದೇವಾಲಯ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಅಮವಾಸ್ಯೆ ದಿನವಾದ ಇಂದು ಶ್ರೀ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ನೂರಾರು ಭಕ್ತರು ಆಗಮಿಸಿದ್ದು, ದೂರದ ಊರುಗಳಿಂದ ವಾಹನಗಳಲ್ಲಿ ಬರುತ್ತಿರುವ ಭಕ್ತರು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಪಾಲಿಸದೆ ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ ಎನ್ನಲಾಗಿದೆ.

Join Whatsapp
Exit mobile version